ADVERTISEMENT

ಶ್ರೀಗಳ 111 ಅಡಿ ಪ್ರತಿಮೆ ಸ್ಥಾಪನೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2018, 15:35 IST
Last Updated 14 ಡಿಸೆಂಬರ್ 2018, 15:35 IST
ಡಾ.ಶಿವಕುಮಾರ ಸ್ವಾಮೀಜಿ
ಡಾ.ಶಿವಕುಮಾರ ಸ್ವಾಮೀಜಿ   

ತುಮಕೂರು: ಎಂಟು ದಶಕಗಳಿಂದ ತ್ರಿವಿಧ ದಾಸೋಹದಲ್ಲಿ ನಿರತರಾಗಿ ಲಕ್ಷಾಂತರ ವಿದ್ಯಾರ್ಥಿಗಳ ಜೀವನಕ್ಕೆ ದಾರಿ ದೀಪವಾಗಿರುವ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ 111 ಅಡಿ ಎತ್ತರದ ಪ್ರತಿಮೆಯನ್ನು ನಗರದ ಅಮಾನಿಕೆರೆಯ ದ್ವೀಪದಲ್ಲಿ ಸ್ಥಾಪಿಸಬೇಕು ಎಂದುಅಮಾನಿಕೆರೆ ಮುಂಜಾನೆ ಗೆಳೆಯರ ಬಳಗ ಮನವಿ ಮಾಡಿದೆ.

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೂಡಲೇ ಕಾರ್ಯೋನ್ಮುಖರಾಗಬೇಕು ಎಂದು ಬಳಗದ ವತಿಯಿಂದ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಕೋರಲಾಗಿದೆ.

ನಿತ್ಯ ಹತ್ತು ಸಾವಿರ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ಶಿಕ್ಷಣ, ವಸತಿ ಸೌಲಭ್ಯ ಕಲ್ಪಿಸಿರುವುದಲ್ಲದೇ ಮಠಕ್ಕೆ ಬರುತ್ತಿರುವ ಭಕ್ತಾದಿಗಳಿಗೆ ದಾಸೋಹ ವ್ಯವಸ್ಥೆ ಮಾಡುವ ಮೂಲಕ ಸ್ವಾಮೀಜಿಯವರು ನಡೆದಾಡುವ ದೇವರೇ ಆಗಿಬಿಟ್ಟಿದ್ದಾರೆ. ಪ್ರತಿಮೆ ನಿರ್ಮಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.