ADVERTISEMENT

ಶಿರಾ: ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2021, 3:29 IST
Last Updated 28 ಸೆಪ್ಟೆಂಬರ್ 2021, 3:29 IST
ಶಿರಾದಲ್ಲಿ‌ ಭಾರತ್ ಬಂದ್ ಹಿನ್ನೆಲೆಯಲ್ಲಿ‌ ಸೋಮವಾರ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು
ಶಿರಾದಲ್ಲಿ‌ ಭಾರತ್ ಬಂದ್ ಹಿನ್ನೆಲೆಯಲ್ಲಿ‌ ಸೋಮವಾರ ವಿವಿಧ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು   

ಶಿರಾ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಕರೆ ನೀಡಿದ್ದ ಭಾರತ್ ಬಂದ್‌ಗೆ ಪಟ್ಟಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಂದ್‌ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದವು. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾ‌ ಸಭೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನಾದೂರು ಕೆಂಚಪ್ಪ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿವೆ. ರೈತ ವಿರೋಧಿ ಕೃಷಿ ಕಾಯ್ದೆ, ವಿದ್ಯುತ್ ಖಾಸಗೀಕರಣ, ಕನಿಷ್ಠ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರು 10 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಸ್ವಂದಿಸುತ್ತಿಲ್ಲ ಎಂದು ದೂರಿದರು.

ADVERTISEMENT

ತಾಲ್ಲೂಕಿನ ಮದಲೂರು ಕೆರೆಗೆ ನೀರು ಹರಿಸುವುದು, ಭದ್ರಾ ಮೇಲ್ದಂಡೆ ಯೋಜನೆ ತ್ವರಿತಗೊಳಿಸುವುದು, ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸಿದರು.

ಅನ್ನದಾತರು ಬೀದಿಗೆ ಇಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಈಗಲಾದರೂ ಎಚ್ಚೆತ್ತು ರೈತರ ನೋವಿಗೆ ಸ್ವಂದಿಸುವ ಕೆಲಸ ಮಾಡಬೇಕು ಎಂದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಧನಂಜಯಾರಾಧ್ಯ, ಪರಮಶಿವಯ್ಯ, ತಾಲ್ಲೂಕು ಅಧ್ಯಕ್ಷ ಲಕ್ಷ್ಮಣಗೌಡ, ದ್ಯಾಮೇಗೌಡ, ಜಗಧೀಶ್, ಮಕುಂದಪ್ಪ, ಪರಮೇಶ್, ಪರಸಪ್ಪ, ರಾಮಣ್ಣ, ಸಿಐಟಿಯು ಸಂಘಟನೆಯ ಕರಿಯಪ್ಪ, ಜಯಣ್ಣ, ಬಿಎಸ್‌ಪಿಯ ಜೆ.ಎನ್. ರಾಜಸಿಂಹ, ಟೈರ್ ರಂಗನಾಥ್, ಎಸ್‌ಡಿಪಿಐ ಅಧ್ಯಕ್ಷ ಉಮ್ರುದ್ದೀನ್, ತೌಫಿಕ್ ಅಹಮದ್, ಸಿಪಿಐನ ಭೂತೇಶ್
ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.