ADVERTISEMENT

ಟೇಪ್ ಅಳವಡಿಸಲು ಕಾಲಾವಕಾಶಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 5:07 IST
Last Updated 28 ಸೆಪ್ಟೆಂಬರ್ 2022, 5:07 IST
ತುಮಕೂರಿನಲ್ಲಿ ಮಂಗಳವಾರ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್‌. ರಾಜು ಅವರಿಗೆ ಲಾರಿ, ಟೆಂಪೊ, ಸರಕು ಸಾಗಣೆ ವಾಹನಗಳ ಮಾಲೀಕರ ಸಂಘಟನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು
ತುಮಕೂರಿನಲ್ಲಿ ಮಂಗಳವಾರ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್‌. ರಾಜು ಅವರಿಗೆ ಲಾರಿ, ಟೆಂಪೊ, ಸರಕು ಸಾಗಣೆ ವಾಹನಗಳ ಮಾಲೀಕರ ಸಂಘಟನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು   

ತುಮಕೂರು: ವಾಹನಗಳಿಗೆ ರೆಟ್ರೋ ರಿಫ್ಲೆಕ್ಟರ್‌ ಟೇಪ್ ಅಳವಡಿಸಲು ಹೆಚ್ಚಿನ ಕಾಲಾವಕಾಶನೀಡುವಂತೆ ಒತ್ತಾಯಿಸಿ ಲಾರಿ ಮಾಲೀಕರ ಸಂಘ, ಸರಕು ಸಾಗಣೆ ವಾಹನ ಮಾಲೀಕರ ಸಂಘ, ಟ್ಯಾಕ್ಸಿ ಅಸೋಸಿಯೇಷನ್‌ ಪದಾಧಿಕಾರಿಗಳು ಮಂಗಳವಾರ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್‌. ರಾಜು ಅವರಿಗೆ ಮನವಿ ಸಲ್ಲಿಸಿದರು.

‘ಫೆಡರೇಷನ್ ಆಫ್‌ ಕರ್ನಾಟಕ ಲಾರಿ ಮಾಲೀಕರ ಸಂಘ’ದ ಜಂಟಿ ಕಾರ್ಯದರ್ಶಿ ಕೃಷ್ಣಮೂರ್ತಿ, ‘ವಾಹನಗಳಿಗೆ ಈ ಟೇಪ್ ಅಂಟಿಸಲು ಸರ್ಕಾರ ಆದೇಶ ಹೊರಡಿಸಿದೆ. 12 ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ, ಟೇಪ್ ಬೆಲೆ ತುಂಬಾ ದುಬಾರಿಯಾಗಿರುವ ಕಾರಣ ಇನ್ನು ವಾಹನಗಳಿಗೆ ಅಳವಡಿಸಲು ಸಾಧ್ಯವಾಗಿಲ್ಲ. ಹಾಗಾಗಿ ಹೆಚ್ಚಿನ ಸಮಯ ನೀಡಬೇಕು’ ಎಂದು ಒತ್ತಾಯಿಸಿದರು.

ಟೇಪ್ ಅಳವಡಿಕೆಯಿಂದ ಅಪಘಾತ ತಡೆಯಬಹುದು. ಇದರ ಬೆಲೆ ದುಬಾರಿಯಾಗಿರುವುದರಿಂದ ಸದ್ಯಕ್ಕೆ ಕಷ್ಟವಾಗುತ್ತಿದ್ದು, ಗುಣಮಟ್ಟದ ಟೇಪ್‍ ಅನ್ನು ಕಡಿಮೆ ಬೆಲೆಗೆ ನೀಡಿದರೆ ಖರೀದಿಸಿ ಅಳವಡಿಸಬಹುದಾಗಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.