ADVERTISEMENT

ಕೆಲಸದ ಅವಧಿ ತಗ್ಗಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಮೇ 2020, 17:39 IST
Last Updated 28 ಮೇ 2020, 17:39 IST
ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯು ಸದಸ್ಯೆಯರು ಬೇಡಿಕೆಯ ಫಲಕಗಳನ್ನು ಪ್ರದರ್ಶಿಸಿದರು
ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯು ಸದಸ್ಯೆಯರು ಬೇಡಿಕೆಯ ಫಲಕಗಳನ್ನು ಪ್ರದರ್ಶಿಸಿದರು   

ತುಮಕೂರು: ಕಾರ್ಮಿಕರ ದುಡಿಮೆ ಅವಧಿ ಕಡಿಮೆ ಮಾಡಲು, ವಲಸೆ ಕಾರ್ಮಿಕರಿಗೆ ಜೀವನ ಯೋಗ್ಯ ವಾತಾವರಣ ಕಲ್ಪಿಸುವಂತೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯು ಆನ್‌ಲೈನ್‌ ಮೂಲಕ ಗುರುವಾರ ಪ್ರತಿಭಟನೆ ಮಾಡಿತು.

ಸಂಘಟನೆ ಸದಸ್ಯೆಯರು ಬೇಡಿಕೆಯ ಫಲಕಗಳನ್ನು ಪ್ರದರ್ಶಿಸುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡರು.

ಲಾಕ್‌ಡೌನ್‌ ಸಂದರ್ಭದಲ್ಲಿ ಹೆಚ್ಚುತ್ತಿರುವ ಕೌಟುಂಬಿಕ ದೌರ್ಜನ್ಯಗಳನ್ನು ತಡೆಯಲು ಕ್ರಮ ವಹಿಸಬೇಕು. ಪೌಷ್ಟಿಕ ಆಹಾರ ವಿತರಿಸುವ ಮಾತೃಶ್ರೀ ಯೋಜನೆಯನ್ನು ಮುಂದುವರೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ADVERTISEMENT

ವಲಸೆ ಕಾರ್ಮಿಕರು ರಾಜ್ಯಗಳಿಗೆ ವಾಪಸ್ ಹೋಗಲು ಸೂಕ್ತ ವ್ಯವಸ್ಥೆ ಮಾಡಬೇಕು. ಅವರಿಗೆ ಉದ್ಯೋಗ ಅವಕಾಶ ಕಲ್ಪಿಸಬೇಕು, ಜೀವನ ಭದ್ರತೆ ಒದಗಿಸಬೇಕು ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಮಿಕರು, ಕೃಷಿಕ ಮಹಿಳೆಯರು, ಆಶಾ ಕಾರ್ಯಕರ್ತೆಯರು ಒತ್ತಾಯಿಸಿದರು. ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷೆ ಎಂ.ವಿ.ಕಲ್ಯಾಣಿ ನೇತೃತ್ವದಲ್ಲಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.