ADVERTISEMENT

ಒಳಮೀಸಲಾತಿ ವಿರೋಧಿಸಿಲ್ಲ: ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2025, 20:32 IST
Last Updated 9 ಆಗಸ್ಟ್ 2025, 20:32 IST
ಜಿ.ಪರಮೇಶ್ವರ
ಜಿ.ಪರಮೇಶ್ವರ   

ತುಮಕೂರು: ‘ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸಲು ಯಾವುದೇ ರೀತಿ ವಿರೋಧ ವ್ಯಕ್ತಪಡಿಸಿಲ್ಲ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಸ್ಪಷ್ಟಪಡಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒಳ ಮೀಸಲಾತಿ ಕುರಿತು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಆಯೋಗದ ವರದಿಯನ್ನು ವಿರೋಧಿಸಿಲ್ಲ. ಸಚಿವ ಸಂಪುಟ ಸಭೆಯಲ್ಲೂ ವಿರೋಧ ವ್ಯಕ್ತಪಡಿಸಿಲ್ಲ’ ಎಂದರು.

‘ವಿಧಾನಸಭೆ ಚುನಾವಣೆ ಸಮಯದಲ್ಲಿ ಪಕ್ಷ ನೀಡಿದ್ದ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಭರವಸೆ ನೀಡಲಾಗಿದೆ. ನಾನೇ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸಿ, ಈ ವಿಚಾರವನ್ನು ಸೇರಿಸಿದ್ದೆ. ಈಗ ಏಕೆ ವಿರೋಧ ವ್ಯಕ್ತಪಡಿಸಲಿ?’ ಎಂದು ಪ್ರಶ್ನಿಸಿದರು. 

ADVERTISEMENT

ಆ.16ರಂದು ನಡೆಯುವ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ವರದಿ ಬಗ್ಗೆ ಚರ್ಚಿಸಿ, ಒಳಮೀಸಲಾತಿ ಕಲ್ಪಿಸುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.