ADVERTISEMENT

ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 6 ಜನವರಿ 2021, 5:11 IST
Last Updated 6 ಜನವರಿ 2021, 5:11 IST
ನಿವೃತ್ತ ಯೋಧ ಚಿರಂಜೀವಿ ಅವರನ್ನು ಗೋಣಿತುಮಕೂರು ಗ್ರಾಮಸ್ಥರು ಸಂಭ್ರಮದಿಂದ ಬರಮಾಡಿಕೊಂಡರು
ನಿವೃತ್ತ ಯೋಧ ಚಿರಂಜೀವಿ ಅವರನ್ನು ಗೋಣಿತುಮಕೂರು ಗ್ರಾಮಸ್ಥರು ಸಂಭ್ರಮದಿಂದ ಬರಮಾಡಿಕೊಂಡರು   

ತುರುವೇಕೆರೆ: ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಮರಳಿದ ಯೋಧ ಜಿ.ಎಸ್.ಚಿರಂಜೀವಿ ಅವರನ್ನು ಗೋಣಿ ತುಮಕೂರು ಗ್ರಾಮಸ್ಥರು ಭವ್ಯ ಸ್ವಾಗತದೊಂದಿಗೆ ಬರಮಾಡಿಕೊಂಡರು.

ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ, ಎಪಿಎಂಸಿ ಸದಸ್ಯ ವಿಜಯಕುಮಾರ್, ಮುಖಂಡ ಗುಡ್ಡೇನಹಳ್ಳಿ ಮಂಜುನಾಥ್ ಸೇರಿ ಮೈಸೂರು ಪೇಟ, ಶಾಲು ಹಾಕಿ ಸನ್ಮಾನಿಸಿದರು.

ಪಟ್ಟಣದ ನಾಗರಿಕರು, ವಿವಿಧ ರಾಜಕೀಯ ಮುಖಂಡರು, ಆಟೊ ಚಾಲಕರು, ನಾಗರಿಕರು, ಎಬಿವಿಪಿ ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಕಾರ್ಯಕರ್ತರು ಭಾಗವಹಿಸಿ ಸನ್ಮಾನಿಸಿದರು.

ADVERTISEMENT

ಪಟ್ಟಣದ ಪ್ರವಾಸಿ ಮಂದಿರದಿಂದ ತೆರೆದ ವಾಹನದಲ್ಲಿ ವೀರಯೋಧನನ್ನು ಮೆರವಣಿಗೆ ನಡೆಸಿದ ಅಭಿಮಾನಿಗಳು ರಸ್ತೆಯುದ್ದಕ್ಕೂ ನಿವೃತ್ತ ಯೋಧನ ಮೇಲೆ ಹೂಮಳೆಗರೆದರು. ರಸ್ತೆ ಅಕ್ಕಪಕ್ಕ ನಿಂತ ಜನರು ಅಭಿನಂದನೆ ಸಲ್ಲಿಸಿದರು. ಯೋಧನ ಕುಟುಂಬಸ್ಥರು, ಸಂಬಂಧಿಕರು ಹಾಗೂ ಗ್ರಾಮದ ಜನರು ಹಬ್ಬದೋಪಾದಿಯಲ್ಲಿ ಆಚರಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.