ADVERTISEMENT

ಅಕ್ಕಿ ಗಿರಣಿಗಳು ಉತ್ಪಾದನೆ ಆರಂಭಿಸಬಹುದು: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2020, 14:38 IST
Last Updated 30 ಮಾರ್ಚ್ 2020, 14:38 IST

ತುಮಕೂರು: ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಕಾರ್ಖಾನೆಗಳನ್ನು ಮುಚ್ಚಲಾಗಿದೆ. ಆದರೆ, ಅಕ್ಕಿ ಗಿರಣಿಗಳನ್ನು ಎಂದಿನಂತೆ ತೆರೆದು ಉತ್ಪಾದನೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್ ತಿಳಿಸಿದ್ದಾರೆ.

ಅಕ್ಕಿ ಮತ್ತು ಅದರ ಉತ್ಪಾದನೆಗಳ ಸಾಗಾಣಿಕೆಗೆ ಯಾವುದೇ ಅಡೆ-ತಡೆ ಇರುವುದಿಲ್ಲ. ಅಕ್ಕಿ ಗಿರಣಿಗಳಿಗೆ ಬೇಕಾದ ಭತ್ತ ಸಾಗಾಣೆ ಮಾಡಿಕೊಳ್ಳಲು, ರೈತರು ಗಿರಣಿಗಳಿಗೆ ಭತ್ತವನ್ನು ತಂದು ಮಾರಾಟ ಮಾಡಲು, ಅಕ್ಕಿ ಗಿರಣಿಗಳಲ್ಲಿ ಉತ್ಪಾದನೆಯಾಗುವ ಅಕ್ಕಿ ಮತ್ತಿತರೆ ವಸ್ತುಗಳನ್ನು ಸಾಗಾಣಿಕೆ ಮಾಡಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ರೈಸ್‌ ಮಿಲ್‍ನ ಮಾಲೀಕರು ತಮ್ಮ ರೈಸ್ ಮಿಲ್‍ಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಡ್ಡಾಯವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳನ್ನು ಒದಗಿಸಬೇಕು ಹಾಗೂ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.