ADVERTISEMENT

ತುಮಕೂರು | ಗಣೇಶ ಪೆಂಡಾಲ್‌ನಲ್ಲಿ ಹಾಡಿಗಾಗಿ ಗಲಾಟೆ: ಬಿಹಾರದ ಯುವಕನ ಹತ್ಯೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2024, 14:25 IST
Last Updated 10 ಸೆಪ್ಟೆಂಬರ್ 2024, 14:25 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ತುಮಕೂರು: ನಗರ ಹೊರವಲಯದ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ರಾತ್ರಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಹಾಕಿದ್ದ ಪೆಂಡಾಲ್‌ನಲ್ಲಿ ಹಾಡು ಬದಲಾಯಿಸುವ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.

ಬಿಹಾರದ ಚೋಟನ್‌ ಕುಮಾರ್‌ (19) ಕೊಲೆಯಾದ ಯುವಕ. ಬಿಹಾರದ ರಾಂಬಾಬು (20), ಮೌಂಟುಕುಮಾರ್‌ (20), ಸಂಜೀವ್‌ಕುಮಾರ್‌ (20) ಕೊಲೆ ಆರೋಪಿಗಳು. ಎಲ್ಲರೂ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು.

ADVERTISEMENT

ಸೆ. 7ರಂದು ರಾತ್ರಿ ಗಣಪತಿ ಪ್ರತಿಷ್ಠಾಪನೆ ನಂತರ ಎಲ್ಲರು ನೃತ್ಯ ಮಾಡುತ್ತಿದ್ದರು. ಇದೇ ಸಮಯದಲ್ಲಿ ಹಾಡು ಬದಲಾಯಿಸುವ ವಿಚಾರಕ್ಕೆ ಕೊಲೆಯಾದ ಯುವಕ ಮತ್ತು ಆರೋಪಿಗಳ ಮಧ್ಯೆ ಗಲಾಟೆ ನಡೆದಿದೆ. ಸ್ಥಳದಲ್ಲಿದ್ದವರು ಅವರನ್ನು ಸಮಾಧಾನ ಪಡಿಸಿ, ಅಲ್ಲಿಂದ ಹೊರಗಡೆ ಕಳುಹಿಸಿದ್ದರು.

ಹೊರ ಬಂದ ಆರೋಪಿಗಳು ಚಾಕುವಿನಿಂದ ಚೋಟನ್‌ ಕುಮಾರ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಕುತ್ತಿಗೆ, ಬೆನ್ನಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಆತನನ್ನು ಶ್ರೀದೇವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.