ADVERTISEMENT

ಗುಬ್ಬಿ: ಸುಟ್ಟ ರಥಕ್ಕೆ ಧಾರ್ಮಿಕ ಸಂಸ್ಕಾರ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2024, 5:44 IST
Last Updated 20 ಮಾರ್ಚ್ 2024, 5:44 IST
ಗುಬ್ಬಿ ತಾಲ್ಲೂಕಿನ ಎನ್.ಪುರದ ಕಲ್ಲೇಶ್ವರ ರಥಕ್ಕೆ ಧಾರ್ಮಿಕವಾಗಿ ಸಂಸ್ಕಾರ ನೆರವೇರಿಸಿದ ಗ್ರಾಮಸ್ಥರು
ಗುಬ್ಬಿ ತಾಲ್ಲೂಕಿನ ಎನ್.ಪುರದ ಕಲ್ಲೇಶ್ವರ ರಥಕ್ಕೆ ಧಾರ್ಮಿಕವಾಗಿ ಸಂಸ್ಕಾರ ನೆರವೇರಿಸಿದ ಗ್ರಾಮಸ್ಥರು   

ಗುಬ್ಬಿ: ನಿಟ್ಟೂರು ಹೋಬಳಿ ಎನ್.ಪುರ ಗ್ರಾಮದ ಕಲ್ಲೇಶ್ವರ ಸ್ವಾಮಿ ರಥ ಸಂಪೂರ್ಣವಾಗಿ ಸುಟ್ಟು ಹೋಗಿದ್ದರಿಂದ ಗ್ರಾಮಸ್ಥರು ಹಾಗೂ ಭಕ್ತರು ಸೇರಿ ಸುಟ್ಟಿರುವ ರಥ ಹಾಗೂ ತೇರು ಮನೆಗೆ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿ ಹೋಮ ನಡೆಸಿದರು.

ತೇವಡಿಹಳ್ಳಿ ಮಠದ ಚನ್ನಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಟ್ಟದಹಳ್ಳಿ ಚಂದ್ರಶೇಖರ ಸ್ವಾಮೀಜಿ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸುಟ್ಟ ರಥದ ಭಾಗಗಳನ್ನು ಬಿಚ್ಚಿ ಮಣ್ಣಿನಲ್ಲಿ ಮುಚ್ಚಿ ಸಂಸ್ಕಾರ ಮಾಡಲಾಯಿತು.

ಮಾರ್ಚ್‌ 20ರಿಂದ ಪ್ರಾರಂಭಗೊಳ್ಳಲಿರುವ ಕಲ್ಲೇಶ್ವರ ಜಾತ್ರೆಯನ್ನು ಧಾರ್ಮಿಕವಾಗಿ ನೆರವೇರಿಸಲು ಮುಂದಾಗಿದ್ದಾರೆ.

ADVERTISEMENT

ಕಲ್ಲೇಶ್ವರ ಸ್ವಾಮಿ ರಥ ಇಲ್ಲದಿರುವುದರಿಂದ ಗ್ರಾಮದಲ್ಲಿರುವ ಸಿದ್ದಲಿಂಗೇಶ್ವರ ದೇವಾಲಯದ ರಥವನ್ನೇ ಬಳಸಿಕೊಂಡು ಈ ಬಾರಿ ಸಂಪ್ರದಾಯ ಬದ್ಧವಾಗಿ ಜಾತ್ರೆ ನಡೆಸುವೆವು. ಮುಂದಿನ ವರ್ಷದೊಳಗೆ ಅಗತ್ಯ ಕ್ರಮ ಕೈಗೊಂಡು ನೂತನ ರಥ ಮಾಡಿಸಲೇಬೇಕಿದೆ ಎಂದು ಗ್ರಾಮಸ್ಥರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.