ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿ ವ್ಯಾಪ್ತಿಯ ಚಿಕ್ಕಪಾಲನಹಳ್ಳಿ ಗೇಟ್ ಬಳಿ ಕಾರು ಹಾಗೂ ದ್ವಿಚಕ್ರವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ತಾಲ್ಲೂಕಿನ ಎ. ವೆಂಕಟಾಪುರದ ಲೋಕೇಶ (26) ಮತ್ತು ಹನುಮಂತ ಪುರದ ನರೇಂದ್ರ (26) ಮೃತಪಟ್ಟವರು.
ಗುರುವಾರ ತಡರಾತ್ರಿ ಐ.ಕೆ. ಕಾಲೊನಿ ಕಡೆಯಿಂದ ದ್ವಿಚಕ್ರವಾಹನದಲ್ಲಿ ಯುವಕರು ಕೊರಟಗೆರೆ ಕಡೆಗೆ ಬರುವಾಗ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಲೋಕೇಶ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ನರೇಂದ್ರ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದ ವೇಳೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಕೊರಟ ಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.