ADVERTISEMENT

ತುಮಕೂರು: ಅಪಘಾತದಲ್ಲಿ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2022, 5:35 IST
Last Updated 23 ಸೆಪ್ಟೆಂಬರ್ 2022, 5:35 IST

ತುಮಕೂರು: ವಿದ್ಯುತ್ ಕಂಬಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಹಿಂಬದಿ ಕುಳಿತಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಮಧುಗಿರಿ ತಾಲ್ಲೂಕಿನ ಕೆರೆಗಳಪಾಳ್ಯ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.

ಮಿಡಿಗೇಶಿ ಹೋಬಳಿಯ ಕಾಟಗೊಂಡನಹಳ್ಳಿ ನಿವಾಸಿ ಕದರಮ್ಮ (55) ಅಪಘಾತದಲ್ಲಿ ಮೃತಪಟ್ಟ ಮಹಿಳೆ. ಮಗ ಮತ್ತು ತಾಯಿ ದ್ವಿಚಕ್ರ ವಾಹನದಲ್ಲಿ ಗ್ರಾಮದಿಂದ ಕೊರಟಗೆರೆಗೆ ತೆರಳುತ್ತಿದ್ದಾಗ ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.