
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಕುಣಿಗಲ್: ಬೈಕ್‌ಗೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ ಸಿದ್ದಾಪುರ ಗೇಟ್ ಬಳಿ ಸಂಭವಿಸಿದೆ.
ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಹಳೆವೂರು ಗ್ರಾಮದ ಶಿವಶಂಕರ್ (63), ಪತ್ನಿ ಸುನಂದಾ (52) ಮೃತಪಟ್ಟವರು. ದಂಪತಿ ಬೈಕ್‌ನಲ್ಲಿ ಎಡೆಯೂರಿಗೆ ಬಂದು ಹಿಂತಿರುಗುವಾಗ ಹಾಸನ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.