ಪಾವಗಡ: ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತಕ್ಕೆ ಹೊಣೆಯಾಗಿಸಿ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಅವರನ್ನು ಅಮಾನತು ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಪಟ್ಟಣದಲ್ಲಿ ಸೊಮವಾರ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ದಯಾನಂದ ಅವರನ್ನು ಅಮಾನತುಗೊಳಿಸಿರುವುದು ಸರ್ಕಾರದ ತಪ್ಪು ನಿರ್ಧಾರ. ಯಾರೋ ಮಾಡಿದ ತಪ್ಪಿಗೆ ಅಧಿಕಾರಿಗಳನ್ನು ಬಲಿಪಶು ಮಾಡುವುದು ಸರಿಯಲ್ಲ. ಕೂಡಲೇ ಸರ್ಕಾರ ಪ್ರಾಮಾಣಿಕ, ದಕ್ಷ ಅಧಿಕಾರಿ ದಯಾನಂದ್ ಅವರ ಅಮಾನತು ಆದೇಶ ರದ್ದುಪಡಿಸಬೇಕು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತುಮಕೂರು ಜಿಲ್ಲಾ ಯುವ ಘಟಕ ಅಧ್ಯಕ್ಷ ಪಾಳೇಗಾರ್ ಲೋಕೇಶ್ ಒತ್ತಾಯಿಸಿದರು.
ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಸೊಗಡು ವಿ. ವೆಂಕಟೇಶ್, ಸರ್ಕಾರದ ತಪ್ಪಿನಿಂದ ಕಾಲ್ತುಳಿತ ನಡೆದು ಅಮಾಯಕರು ಸಾವಿಗೀಡಾಗಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ ನೇರ ಕಾರಣ. ಇವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು. ಆದರೆ ಅವರ ಖುರ್ಚಿ ಉಳಿಸಿಕೊಳ್ಳಲು ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಯನ್ನು ಅಮಾನತು ಮಾಡಿ ಜನರ ದಿಕ್ಕು ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿದರು.
ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಕೆಲಕಾಲ ರಸ್ತೆ ತಡೆ ನಡೆಸಲಾಯಿತು.
ಮಹರ್ಷಿ ವಾಲ್ಮೀಕಿ ಯುವಕ ಸಂಘದ ಅಧ್ಯಕ್ಷ ನರಸಿಂಹ ಕೃಷ್ಣ, ಡಿಜೆ ಎಸ್ ನಾರಾಯಣಪ್ಪ, ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ, ಓಂಕಾರ್ ನಾಯಕ, ಬೇಕರಿ ನಾಗರಾಜ್, ಭಾಸ್ಕರ್ ನಾಯಕ, ಸಿ.ಕೆ. ತಿಪ್ಪೇಸ್ವಾಮಿ, ಪೂಜಾರಪ್ಪ, ಅಂಜನ್ ನಾಯಕ, ನರಸಿಂಹಲು, ಬ್ಯಾಡನೂರು ಶಿವು, ಬಲ್ಲೇನಹಳ್ಳಿ ರಾಮು, ತಿರುಮಲೇಶ್. ವಳ್ಳೂರು ನಾಗೇಶ್, ಕನ್ಮಮೇಡಿ ಕೃಷ್ಣಮೂರ್ತಿ, ಮಂಜುನಾಥ್, ರಂಗಮ್ಮ, ಅಂಬಿಕಾ, ರೂಪ, ವಳ್ಳೂರು ನಾಗೇಶ್, ಕರವೇ ಲಕ್ಷ್ಮೀನಾರಾಯಣ, ಕಾವಲಗೇರಿ ರಾಮಾಂಜಿನಪ್ಪ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.