ADVERTISEMENT

ಕೊಡಿಗೇನಹಳ್ಳಿ | ರಸ್ತೆ ಕಾಮಗಾರಿಗೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 4:35 IST
Last Updated 1 ಆಗಸ್ಟ್ 2025, 4:35 IST
ಕೊಡಿಗೇನಹಳ್ಳಿ ಹೋಬಳಿ ಅಡವಿನಾಗೇನಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಂತಲಾ ರಾಜಣ್ಣ ಭೂಮಿಪೂಜೆ ನೆರವೇರಿಸಿದರು
ಕೊಡಿಗೇನಹಳ್ಳಿ ಹೋಬಳಿ ಅಡವಿನಾಗೇನಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಂತಲಾ ರಾಜಣ್ಣ ಭೂಮಿಪೂಜೆ ನೆರವೇರಿಸಿದರು   

ಕೊಡಿಗೇನಹಳ್ಳಿ: ಪಟ್ಟಣದಲ್ಲಿ ₹3 ಕೋಟಿ ವೆಚ್ಚದ ಜೆಜೆಎಂ ಕಾಮಗಾರಿ, ತೆರಿಯೂರು-ಕಡಗತ್ತೂರು ₹5 ಕೋಟಿ ವೆಚ್ಚದ ರಸ್ತೆ ಜೊತೆಗೆ ಅಡವಿನಾಗೇನಹಳ್ಳಿ-ಸುದ್ದೇಕುಂಟೆಯ ₹5 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಾಂತಲಾ ರಾಜಣ್ಣ ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಕಡಗತ್ತೂರು, ಸುದ್ದೇಕುಂಟೆ-ಅಡವಿನಾಗೇನಹಳ್ಳಿ ರಸ್ತೆಗಳು ತುಂಬಾ ಹದಗೆಟ್ಟಿರುವುದರಿಂದ ಈ ಭಾಗದ ಜನರಿಗೆ ಅನುಕೂಲವಾಗುವಂತೆ ಗುತ್ತಿಗೆದಾರರು ಗುಣಮಟ್ಟದ ರಸ್ತೆಗೆ ಆದ್ಯತೆ ನೀಡಬೇಕು ಎಂದರು. 

ಇಒ ಲಕ್ಷ್ಮಣ್, ನೀರು ಸರಬರಾಜು ಎಇಇ ಲೋಕೇಶ್ವರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿನಾರಾಯಣರೆಡ್ಡಿ, ಕೆಎಂಎಫ್. ನಿರ್ದೇಶಕ ಎಂ.ಪಿ. ಕಾಂತರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಿಲ್ ಶ್ರೀನಿವಾಸ್ ಇತರರು ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.