ADVERTISEMENT

ರಸ್ತೆ ದುರಸ್ತಿ: ಚುನಾವಣೆ ಬಹಿಷ್ಕಾರದ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 2:40 IST
Last Updated 27 ಸೆಪ್ಟೆಂಬರ್ 2020, 2:40 IST
ತುರುವೇಕೆರೆ ತಾಲ್ಲೂಕಿನ ಕಣತೂರು ಕೆ.ಹೊಸೂರು ಗ್ರಾಮದ ರಸ್ತೆ ಕೆಸರು ಗದ್ದೆಯಾಗಿದೆ
ತುರುವೇಕೆರೆ ತಾಲ್ಲೂಕಿನ ಕಣತೂರು ಕೆ.ಹೊಸೂರು ಗ್ರಾಮದ ರಸ್ತೆ ಕೆಸರು ಗದ್ದೆಯಾಗಿದೆ   

ತುರುವೇಕೆರೆ: ತಾಲ್ಲೂಕಿನ ಕಣತೂರು, ಹೊಸೂರು ಗ್ರಾಮದ ರಸ್ತೆ ಕೆಸರು ಗದ್ದೆಯಾಗಿದೆ. ರಸ್ತೆ ದುರಸ್ತಿ ಮಾಡದಿದ್ದರೆ ಮುಂದಿನ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ‌ಗ್ರಾಮಸ್ಥರು ಎಚ್ಚರಿಸಿದ್ದಾರೆ.

ಮಳೆಗಾಲದಲ್ಲಿ ರಸ್ತೆ ತುಂಬೆಲ್ಲಾ ನೀರು ತುಂಬಿಕೊಳ್ಳುತ್ತದೆ. ಮಣ್ಣಿನ ರಸ್ತೆಯಾಗಿರುವುದರಿಂದ ವಾಹನ, ಜನರು ಮತ್ತು ಹಸು ಕರುಗಳು ಓಡಾಡಿ ಕೆಸರು ಗದ್ದೆಯಾಗುತ್ತದೆ. ಸಂಜೆಯಾದರೆ ಸೊಳ್ಳೆಗಳ ಕಾಟ ಹೆಚ್ಚಾಗುತ್ತದೆ. ಇದರಿಂದ ಸಾಂಕ್ರಾಮಿಕ ರೋಗದ ಭೀತಿ ಹೆಚ್ಚಾಗುತ್ತದೆ ಎನ್ನುತ್ತಾರೆ ಗ್ರಾಮಸ್ಥರು.

ರಸ್ತೆ ದುರಸ್ತಿ ಮಾಡುವಂತೆ ಅನೇಕ ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಸ್ಥಳೀಯರು.

ADVERTISEMENT

ಕೂಡಲೇ ಗ್ರಾಮಕ್ಕೆ ಕಾಂಕ್ರಿಟ್‌ ರಸ್ತೆ ಮಾಡಿಸಬೇಕು. ಇಲ್ಲವಾದರೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕರಿಸಲಾಗುವುದು. ಕಣತೂರು ಗ್ರಾಮ ಪಂಚಾಯಿತಿಗೆ ಬೀಗ ಹಾಕಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.