ADVERTISEMENT

ತುಮಕೂರು ಜಿ.ಪಂ.ಅಧ್ಯಕ್ಷೆ ಮನೆಯಲ್ಲಿ ಕಳ್ಳತನ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2020, 19:57 IST
Last Updated 23 ಫೆಬ್ರುವರಿ 2020, 19:57 IST

ತುಮಕೂರು: ತುಮಕೂರು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಲತಾ ರವಿಕುಮಾರ್‌ ಅವರ ಮನೆಯಲ್ಲಿ ಕಳ್ಳತನ ಆಗಿರುವು ಭಾನುವಾರ ರಾತ್ರಿ ಬೆಳಕಿಗೆ ಬಂದಿದೆ.

ಶಿವರಾತ್ರಿ ಹಬ್ಬದ ಪ್ರಯುಕ್ತ ಲತಾ ಅವರು ತಮ್ಮ ಊರಾದ ಕಲ್ಲಕೆರೆಗೆ ಹೋಗಿದ್ದರು. ಈ ವೇಳೆ ಲಕ್ಷಾಂತರ ರೂಪಾಯಿ ಮೌಲ್ಯದ ಒಡವೆ ಹಾಗೂ ಒಂದೂವರೆ ಲಕ್ಷ ಕಳ್ಳತನ ಆಗಿದೆ ಎಂದು ಹೇಳಲಾಗುತ್ತಿದೆ. ಕಳುವಾಗಿರುವ ಹಣ, ಆಭರಣದ ಪಟ್ಟಿಯನ್ನು ಪೊಲೀಸರು ಸಿದ್ಧಪಡಿಸುತ್ತಿದ್ದಾರೆ.

ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮನೆ ಬಂದು ವಸ್ತುಗಳ ಮೇಲಿನ ಬೆರಳಚ್ಚು ಸಂಗ್ರಹಿಸುತ್ತಿದ್ದಾರೆ.

ADVERTISEMENT

ಸ್ಥಳಕ್ಕೆ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಉದೇಶ್‌, ಡಿವೈಎಸ್ಪಿ ತಿಪ್ಪೇಸ್ವಾಮಿ ಭೇಟಿ ನೀಡಿ, ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.