ಕುಣಿಗಲ್: ತಾಲ್ಲೂಕಿನ ಹುತ್ರಿಬೆಟ್ಟದ ಪುರಾತತ್ವ ಇಲಾಖೆ ಸಂರಕ್ಷಿತ ಪ್ರದೇಶದ ಬಳಿ ಕಿಡಿಗೇಡಿಗಳು ಬಂಡೆಗಳನ್ನು ಸ್ಫೋಟಿಸಿದ್ದು, ಹುತ್ರಿದುರ್ಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಲ್ಲೇಶ್ ಕುಣಿಗಲ್ ಪೊಲೀಸರಿಗೆ ದೂರು ನೀಡಿದ್ದಾರೆ.
ಹುತ್ರಿಬೆಟ್ಟದಲ್ಲಿ ಪುರಾತತ್ವ ಇಲಾಖೆಯಿಂದ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಕೋಟೆ ಹೆಬ್ಬಾಗಿಲು ದುರಸ್ತಿಯೂ ನಡೆಯುತ್ತಿದೆ. ಕೋಟೆ ಹೆಬ್ಬಾಗಿಲಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಕಿಡಿಗೇಡಿಗಳು ಅಕ್ರಮವಾಗಿ ಸ್ಫೋಟಕ ಸಾಮಗ್ರಿ ಬಳಸಿ ಬಂಡೆಗಳನ್ನು ಸ್ಫೋಟಿಸಿದ್ದಾರೆ. ಇದರಿಂದಾಗಿ ಕೋಟೆಗೆ ಧಕ್ಕೆಯಾಗಲಿದೆ ಎಂದಿದ್ದಾರೆ.
ಒಂದೆಡೆ ಜನಪ್ರತಿನಿಧಿಗಳು, ತಾಲ್ಲೂಕು ಆಡಳಿತ ಇತಿಹಾಸ ಪ್ರಸಿದ್ಧ ಕೆಂಪೇಗೌಡರಿಂದ ನಿರ್ಮಾಣಗೊಂಡಿರುವ ಹುತ್ರಿಬೆಟ್ಟ ಸಂರಕ್ಷಣೆ, ಅಭಿವೃದ್ಧಿತೆ ಶ್ರಮಿಸುತ್ತಿರುವ ಸಮಯದಲ್ಲಿ ಕಿಡಿಗೇಡಿಗಳು ಬೆಟ್ಟದ ಕೋಟೆಗೆ ಧಕ್ಕೆ ತರಲು ಹೊರಟಿರುವುದು ಸರಿಯಲ್ಲ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.