ADVERTISEMENT

ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನ; ರೌಡಿ ಶೀಟರ್‌ ಬಲಗಾಲಿಗೆ ಗುಂಡು

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2020, 15:59 IST
Last Updated 7 ನವೆಂಬರ್ 2020, 15:59 IST
   

ತುಮಕೂರು: ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರನಾಯಕನಪಾಳ್ಯದ ಬಳಿ ರೌಡಿ ಶೀಟರ್ ರೋಹಿತ್ (25) ಬಲಗಾಲಿಗೆ ನಗರದ ತಿಲಕ್‌ಪಾರ್ಕ್ ಠಾಣೆ ಇನ್‌ಸ್ಪೆಕ್ಟರ್ ಮುನಿರಾಜು ಗುಂಡು ಹಾರಿಸಿದ್ದಾರೆ.

ರೋಹಿತ್ ನೇತೃತ್ವದ ತಂಡ ಇತ್ತೀಚೆಗೆ ವಾಲ್ಮೀಕಿನಗರದ 6ನೇ ಕ್ರಾಸ್‌ನ ವಿಶ್ವೇಶ್ವರ ಆರಾಧ್ಯ ಅವರ ಮನೆಗೆ ನುಗ್ಗಿ ಬೆದರಿಕೆ ಹಾಕಿ ₹ 5.87 ಲಕ್ಷ ಮೌಲ್ಯದ 4 ಚಿನ್ನದ ಬಳೆಗಳು, ₹ 72 ಸಾವಿರ ನಗದು ಮತ್ತು ಎರಡು ಮೊಬೈಲ್ ದೋಚಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಹೊಸ ಬಡಾವಣೆ ಪೊಲೀಸರು ಬಂಧಿಸಿದ್ದರು. ‌ರೋಹಿತ್ ತಲೆಮರೆಸಿಕೊಂಡಿದ್ದ. ಆರೋಪಿ ಮಾರನಾಯಕನಪಾಳ್ಯದ ಬಳಿದ ಬಳಿ ಇರುವುದನ್ನು ಖಚಿತಪಡಿಸಿಕೊಂಡತಿಲಕ್ ಪಾರ್ಕ್ ಠಾಣೆ ಪೊಲೀಸರು ಬಂಧನಕ್ಕೆ ಬಲೆ ಬೀಸಿದರು.

‘ಬಂಧನಕ್ಕೆ ಮುಂದಾದ ವೇಳೆ ಪೊಲೀಸರ ಮೇಲೆ ಆರೋಪಿ ಮಚ್ಚಿನಿಂದ ಹಲ್ಲೆ ನಡೆಸಲು ಮುಂದಾಗಿದ್ದ. ಆಗ ಬಲಗಾಲಿಗೆ ಗುಂಡು ಹಾರಿಸಲಾಯಿತು. ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ರೋಹಿತ್ ಮೇಲೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕೊಲೆ, ಸುಲಿಗೆ, ಬೆದರಿಕೆಗೆ ಸಂಬಂಧಿಸಿದಂತೆ 16 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.