ADVERTISEMENT

ಅಕ್ರಮ ಮದ್ಯ ಮಾರಾಟ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 5:09 IST
Last Updated 28 ಸೆಪ್ಟೆಂಬರ್ 2022, 5:09 IST
ಚಿಕ್ಕನಾಯಕನಹಳ್ಳಿ ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ಮಂಗಳವಾರ ಸಂಜೆ ಲೋಕಾಯುಕ್ತ ಪೊಲೀಸರು ಸಾರ್ವಜನಿಕ ಕುಂದುಕೊರತೆ ಸಭೆ ನಡೆಸಿದರು
ಚಿಕ್ಕನಾಯಕನಹಳ್ಳಿ ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ಮಂಗಳವಾರ ಸಂಜೆ ಲೋಕಾಯುಕ್ತ ಪೊಲೀಸರು ಸಾರ್ವಜನಿಕ ಕುಂದುಕೊರತೆ ಸಭೆ ನಡೆಸಿದರು   

ಚಿಕ್ಕನಾಯಕನಹಳ್ಳಿ: ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ಮಂಗಳವಾರ ಲೋಕಾಯುಕ್ತ ಪೊಲೀಸರು ಸಾರ್ವಜನಿಕ ಕುಂದುಕೊರತೆ ಸಭೆ ನಡೆಸಿದರು.

ಲೋಕಾಯುಕ್ತ ಪೊಲೀಸ್‌ ಉಪಾಧೀಕ್ಷಕ ಸಿ.ಆರ್. ರವೀಶ್‌ ಅವರ ಸಮಕ್ಷಮದಲ್ಲಿ ನಿರೀಕ್ಷಕ ಕೆ. ರಾಮರೆಡ್ಡಿ, ಹೆಡ್‌ ಕಾನ್‌ಸ್ಟೆಬಲ್‌ಗಳಾದ ಬೇಬಿಕಲಾ, ನಳಿನಾಕ್ಷಿ ಅವರು ಸಾರ್ವಜನಿಕರಿಂದ ದೂರು ಸ್ವಿಕರಿಸಿದರು.

15 ದೂರಿನ ಅರ್ಜಿಗಳು ಸಲ್ಲಿಕೆಯಾದವು. ಅವುಗಳಲ್ಲಿ ಬಹುಪಾಲು ಅರ್ಜಿಗಳು ಕಂದಾಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ್ದವು.

ADVERTISEMENT

ತಾಲ್ಲೂಕಿನ ಹೆಸರಳ್ಳಿಯ ಮಹಿಳೆಯರು, ‘ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದೆ. ಸಣ್ಣ ಗೂಡಂಗಡಿಗಳು ಸೇರಿದಂತೆ ಮನೆಗಳಲ್ಲಿ ಬಿಕರಿಯಾಗುತ್ತಿದೆ. ಇದರಿಂದ ನಮ್ಮ ಸಂಸಾರಗಳು ಬೀದಿಗೆ ಬೀಳುತ್ತಿವೆ’ ಎಂದು ಆತಂಕ ವ್ಯಕ್ತಪಡಿಸಿ ಅರ್ಜಿ ಸಲ್ಲಿಸಿದರು.

ದೊಡ್ಡಎಣ್ಣೇಗೆರೆ ಗ್ರಾಮದ ಬಳಿ ನಡೆಯುತ್ತಿರುವ 150ಎ ಹೆದ್ದಾರಿ ಕಾಮಗಾರಿ ಸಂಪೂರ್ಣ ಕಳಪೆಯಿಂದ ಕೂಡಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಪ್ರಶಾಂತ್‌ ದೂರು ಸಲ್ಲಿಸಿದರು.

ಚಿಕ್ಕನಾಯಕನಹಳ್ಳಿ ಪಟ್ಟಣದ ಜೋಗಿಹಳ್ಳಿ ರಸ್ತೆಯಲ್ಲಿರುವ ಸಾಮಿಲ್‌ನಿಂದ ಅಕ್ಕಪಕ್ಕದ ಮನೆಗಳಲ್ಲಿ ವಾಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಮನವಿ ಸಲ್ಲಿಸಿದರು. ನಂತರ ಲೋಕಾಯುಕ್ತ ಪೊಲೀಸರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.