ADVERTISEMENT

ನಾಳೆ ಕನ್ನಡ ಭವನದಲ್ಲಿ ಸಂವಾದ

ಚುನಾವಣೆ; ಒಳ–ಹೊರಗೆ ಮಹಿಳೆಯರು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2018, 13:55 IST
Last Updated 28 ಸೆಪ್ಟೆಂಬರ್ 2018, 13:55 IST

ತುಮಕೂರು: ‘ಚುನಾವಣೆ: ಒಳ– ಹೊರಗೆ ಮಹಿಳೆಯರು’ ಎಂಬ ವಿಷಯ ಕುರಿತು ಸೆ.30ರಂದು ನಗರದ ಕನ್ನಡ ಭವನದಲ್ಲಿ ಭಾನುವಾರ ( ಸೆ.30ರಂದು ) ಬೆಳಿಗ್ಗೆ 10.30ಕ್ಕೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಜಿಲ್ಲಾ ಕನ್ನಡ ಸಾಹಿತ್ಯ ಆಶ್ರಯದಲ್ಲಿ ಆಯೋಜಿಸಲಾಗಿದೆ.

ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಅಧ್ಯಕ್ಷತೆವಹಿಸಲಿದ್ದು, ಸೂಲಗಿತ್ತಿ ನರಸಮ್ಮ ಉಪಸ್ಥಿತರಿರುವರು. ಸಮತಾ ಬಳಗದ ಡಾ.ಅರುಂಧತಿ, ಮಾಜಿ ಸಚಿವೆಯರಾದ ಲೀಲಾದೇವಿ ಆರ್. ಪ್ರಸಾದ್, ಬಿ.ಟಿ.ಲಲಿತಾ ನಾಯಕ್ , ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಶಾಂತಲಾ ರಾಜಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ಭಾಗವಹಿಸಲಿದ್ದಾರೆ.

ADVERTISEMENT

ಚುನಾವಣಾ ಸುಧಾರಣೆ ಕುರಿತು ‘ಪ್ರಜಾವಾಣಿ’ ಸಹಾಯಕ ಸಂಪಾದಕಿ ಸಿ.ಜಿ.ಮಂಜುಳಾ, ರಾಜಕೀಯದಲ್ಲಿ ಮಹಿಳಾ ಮೀಸಲಾತಿ ಕುರಿತು ಹೈಕೋರ್ಟ್ ವಕೀಲರಾದ ಎಚ್.ವಿ.ಮಂಜುನಾಥ್ ಮಾತನಾಡುವರು. ಅಧ್ಯಕ್ಷತೆಯನ್ನು ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಡಾ.ಎಚ್.ಎಸ್.ಅನುಪಮ ವಹಿಸಲಿದ್ದಾರೆ.

ಸಂವಾದದಲ್ಲಿ ವಿವಿಧ ಸಂಘಟನೆ ಮುಖಂಡರು, ಲೇಖಕಿಯರು ಭಾಗವಹಿಸುವರು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಹಾಗೂ ಪಾಲಿಕೆಗೆ ನೂತನವಾಗಿ ಆಯ್ಕೆಯಾದ ಮಹಿಳಾ ಸದಸ್ಯೆಯರಿಗೆ ಸನ್ಮಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.