ADVERTISEMENT

ಸಿಇಟಿ ಪರೀಕ್ಷೆ: 8 ಸಾವಿರ ವಿದ್ಯಾರ್ಥಿಗಳಿಗೆ ಸ್ಯಾನಿಟೈಸಿಂಗ್

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 15:13 IST
Last Updated 28 ಜುಲೈ 2020, 15:13 IST

ತುಮಕೂರು: ನಗರದ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜು ಜುಲೈ 30 ಮತ್ತು 31ರಂದು ಸಿಇಟಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ಜಿಲ್ಲೆಯ ಸುಮಾರು 8,000 ವಿದ್ಯಾರ್ಥಿಗಳಿಗೆ ಸ್ಯಾನಿಟೈಸ್ ಮಾಡುವ ಕಾರ್ಯಕ್ಕೆ ಮುಂದಾಗಿದೆ.

ಈ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಪಿಯು ಮಂಡಳಿ ನಿರ್ದೇಶಕರಿಂದ ವಿದ್ಯಾರ್ಥಿಗಳಿಗೆ ಸ್ಯಾನಿಟೈಸಿಂಗ್ ಮಾಡುವ ಕುರಿತು ಅಧಿಕೃತ ಪರವಾನಿಗೆ ಪಡೆಯಲಾಗಿದೆ. ಜಿಲ್ಲೆಯಲ್ಲಿ 21ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 8,000 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಆಯಾ ಪರೀಕ್ಷಾ ಕೇಂದ್ರದಲ್ಲಿ ತುಮಕೂರಿನ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನ 5 ಮಂದಿ ಪ್ರಾಧ್ಯಾಪಕರನ್ನು ಒಳಗೊಂಡ ತಂಡವು ವಿದ್ಯಾರ್ಥಿಗಳಿಗೆ ಸ್ಯಾನಿಟೈಸಿಂಗ್ ಮಾಡುವ ಕಾರ್ಯ ನಿರ್ವಹಿಸಲಿದೆ.

‘ಸರ್ಕಾರದ ಮಾರ್ಗಸೂಚಿ ಅನುಸರಿಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸ್ಯಾನಿಟೈಸಿಂಗ್ ಮಾಡಲಾಗುವುದು. ಮೂಂಜಾಗರೂಕತೆ ಕುರಿತು ಕಾಲೇಜಿನ ಪ್ರಾಧ್ಯಾಪಕರು ಮನವರಿಕೆ ಮಾಡುವ ಸ್ವಯಂಪ್ರೇರಣಾ ಕೆಲಸದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಕಾಲೇಜು ಪ್ರಾಂಶುಪಾಲ ಡಾ.ಎಂ.ಎಸ್.ರವಿಪ್ರಕಾಶ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.