ಸಾವು
(ಪ್ರಾತಿನಿಧಿಕ ಚಿತ್ರ)
ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗ ಮತ್ತು ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ರಾಜ್ಯ ಹೆದ್ದಾರಿ 33ರ ಕೆಂಪನಹಳ್ಳಿ ಬಳಿ ಟ್ರಾಕ್ಟರ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮದ್ದೂರು ತಾಲ್ಲೂಕಿನ ನಂಬಿನಾಯಕನ ಹಳ್ಳಿಯ ದರ್ಶನ್ ಗೌಡ (25) ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಚಂದನ್ ತೀವ್ರವಾಗಿ ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆಯ ಗವಿಮಠ ಸೇತುವೆ ಬಳಿ ನಡೆದ ಅಪಘಾತದಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಅರಕೆರೆ ರವಿಕುಮಾರ್ (38) ಅವರಿಗೆ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.