ADVERTISEMENT

ಎಸ್‌ಸಿ ಪಟ್ಟಿಯಿಂದ ಕೈ ಬಿಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಜೂನ್ 2020, 14:57 IST
Last Updated 22 ಜೂನ್ 2020, 14:57 IST
ಸ್ಪರ್ಶ ಜಾತಿಗಳನ್ನು ಎಸ್‌ಸಿ ಪಟ್ಟಿಯಿಂದ ಕೈ ಬಿಡುವಂತೆ ಮಾದಿಗ ದಂಡೋರ ಹೋರಾಟ ಸಮಿತಿ ಹಾಗೂ ಛಲವಾದಿ ಮಹಾಸಭಾ ಪದಾಧಿಕಾರಿಗಳು ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು
ಸ್ಪರ್ಶ ಜಾತಿಗಳನ್ನು ಎಸ್‌ಸಿ ಪಟ್ಟಿಯಿಂದ ಕೈ ಬಿಡುವಂತೆ ಮಾದಿಗ ದಂಡೋರ ಹೋರಾಟ ಸಮಿತಿ ಹಾಗೂ ಛಲವಾದಿ ಮಹಾಸಭಾ ಪದಾಧಿಕಾರಿಗಳು ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು   

ತುಮಕೂರು: ಸ್ಪರ್ಶ ಜಾತಿಗಳನ್ನು ಪರಿಶಿಷ್ಟ ಜಾತಿಪಟ್ಟಿಯಿಂದ ಕೈಬಿಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಾದಿಗ ದಂಡೋರ ಹೋರಾಟ ಸಮಿತಿ ಮತ್ತು ಛಲವಾದಿ ಮಹಾಸಭಾ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಸ್ಪರ್ಶ ಜಾತಿಗಳಾದ ಬಂಜಾರ, ಭೋವಿ, ಕೊರಮ ಮತ್ತು ಕೊರಚ ಜಾತಿಗಳು ಇವೆ. ಈ ಜಾತಿಗಳು ರಾಷ್ಟ್ರಪತಿ ಪಟ್ಟಿಯಲ್ಲಿ ನಮೂದಾಗಿಲ್ಲ. ಆದ್ದರಿಂದ ಈ ಜಾತಿಗಳನ್ನು ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆಯಬೇಕು ಎಂದು ಆಗ್ರಹಿಸಿದರು.

ಮಾದಿಗ ದಂಡೋರ ರಾಜ್ಯ ವಕ್ತಾರ ಎಂ.ವಿ.ರಾಘವೇಂದ್ರಸ್ವಾಮಿ, ಜಿಲ್ಲಾ ಘಟಕದ ಡಿ.ಸಿ.ರಾಜಣ್ಣ, ಎ.ನಾಗೇಶ್, ಬಂಡೆ ಕುಮಾರ್, ಪಾವಗಡ ರಾಮಾಂಜಿ, ಗೂಳೂರು ರಾಜಣ್ಣ, ಇನಕನಹಳ್ಳಿ ಮೂರ್ತಣ್ಣ, ಶಿವು, ಮಾಗೋಡು ಯೋಗಾನಂದ, ಮಹಾಲಿಂಗಯ್ಯ, ಕೃಷ್ಣಪ್ಪ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.