ADVERTISEMENT

ಇಂದು ಶಾಲಾ ಶಿಕ್ಷಕ ನೇಮಕಾತಿ ಪರೀಕ್ಷೆ; ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 24 ಮೇ 2019, 20:24 IST
Last Updated 24 ಮೇ 2019, 20:24 IST

ತುಮಕೂರು: ತುಮಕೂರು ನಗರದ ೫ ಹಾಗೂ ಮಧುಗಿರಿ ಪಟ್ಟಣದ 2 ಪರೀಕ್ಷಾ ಕೇಂದ್ರಗಳಲ್ಲಿ ಮೇ 25 ಹಾಗೂ 26ರಂದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ನೇಮಕಾತಿ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿ ಪ್ರದೇಶ ನಿಷೇಧಾಜ್ಞೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ತಿಳಿಸಿದ್ದಾರೆ.

‘ನಿಷೇಧಾಜ್ಞೆಯು ಮೇ 25 ಹಾಗೂ 26ರ ಬೆಳಿಗ್ಗೆ 9 ಗಂಟೆಯಿಂದ 5.30ರವರೆಗೆ ಜಾರಿಯಲ್ಲಿರುತ್ತದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚಬೇಕು’ ಎಂದು ಸೂಚಿಸಿದ್ದಾರೆ.

ADVERTISEMENT

‘ನಿಷೇಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿಗಳು ಪ್ರವೇಶಿಸುವಂತಿಲ್ಲ. ತಪ್ಪಿದಲ್ಲಿ ಅಂತಹವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.