ADVERTISEMENT

ಎಸ್ಸಿಎಸ್ಟಿ ಕುಂದುಕೊರತೆ ಸಭೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಅಳಲು ತೋಡಿಕೊಂಡು ದಲಿತರು

​ಪ್ರಜಾವಾಣಿ ವಾರ್ತೆ
Published 25 ಮೇ 2019, 13:47 IST
Last Updated 25 ಮೇ 2019, 13:47 IST
ಎಸ್ಸಿಎಸ್ಟಿ ಕುಂದುಕೊರತೆ ಸಭೆಯ ನೋಟ
ಎಸ್ಸಿಎಸ್ಟಿ ಕುಂದುಕೊರತೆ ಸಭೆಯ ನೋಟ   

ತುಮಕೂರು: ನಗರದ ಚಿಲುಮೆ ಸಮುದಾಯ ಭವನದಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.

ಜಿಲ್ಲೆಯ ದಲಿತ ಸಂಘಟನೆಗಳ ಮುಖಂಡರು ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯ, ಶೋಷಣೆ, ದೂರು ನೀಡಿದರೂ ತುರ್ತು ಕ್ರಮ ಕೈಗೊಳ್ಳದೇ ಠಾಣಾಧಿಕಾರಿಗಳು ಕಾಲಹರಣ ಮಾಡುವುದು, ದಲಿತರ ದೂರುಗಳನ್ನು ಉಪೇಕ್ಷೆ ಮಾಡುವುದು, ಪ್ರತಿ ದೂರು ಇತ್ಯರ್ಥಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬಂದು ಮನವಿ ಮಾಡಬೇಕಾದ ಸ್ಥಿತಿ ಎದುರಾಗಿರುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಎಸ್ಸಿಎಸ್ಟಿ ಸಂಘಟನೆಗಳ ಮುಖಂಡರು ಸಭೆಯಲ್ಲಿ ಹೇಳಿಕೊಂಡರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ಡಿವೈಎಸ್ಪಿ ಮತ್ತು ಸರ್ಕಲ್ ಇನ್‌ಸ್ಪೆಕ್ಟರ್‌ಗಳಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.