ADVERTISEMENT

ಸರಣಿ ಅಪಘಾತ: ವ್ಯಕ್ತಿ ಸಾವು, ನಾಲ್ವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 6:27 IST
Last Updated 22 ಫೆಬ್ರುವರಿ 2026, 6:27 IST
<div class="paragraphs"><p>(ಸಾಂದರ್ಭಿಕ ಚಿತ್ರ)</p></div>

(ಸಾಂದರ್ಭಿಕ ಚಿತ್ರ)

   

ಗೆಟ್ಟಿ ಚಿತ್ರ

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿಯ ಬ್ಯಾಡರಹಳ್ಳಿ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿ 150–ಎ ನಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಬ್ಯಾಡರಹಳ್ಳಿಯ ವೆಂಕಟೇಶ್ (57) ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ADVERTISEMENT

ಮಾರ್ಗ ಮಧ್ಯೆ ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಬಂದ ಕಾರ್ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಅನಿಲ್, ಭರತ್, ಉಲ್ಲಾಸ, ರವೀಶ ಗಾಯಗೊಂಡಿದ್ದಾರೆ. ರಕ್ಷಿಸಲು ಹೋದ ವೆಂಕಟೇಶ್ ಅವರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಾಲಕ ಹಾಗೂ ನಿರ್ವಾಹಕ ಸ್ಥಳದಲ್ಲೇ ಬಸ್ ಬಿಟ್ಟು ಪರಾರಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.