ಡಿವೈಎಸ್‌ಪಿ ಎ.ರಾಮಚಂದ್ರಪ್ಪ
ಮಧುಗಿರಿ (ತುಮಕೂರು): ದೂರು ನೀಡಲು ಕಚೇರಿಗೆ ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ನ್ಯಾಯಾಂಗ ಬಂಧನ ದಲ್ಲಿರುವ ಮಧುಗಿರಿ ಡಿವೈಎಸ್‌ಪಿ ಎ.ರಾಮಚಂದ್ರಪ್ಪ ವಿರುದ್ಧ ಮತ್ತೊಬ್ಬ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ.
ಕೊರಟಗೆರೆ ತಾಲ್ಲೂಕಿನ ಪರಿಶಿಷ್ಟ ಪಂಗಡದ ಮಹಿಳೆಯೊಬ್ಬರು ಈ ಸಂಬಂಧ ಬುಧವಾರ ಮಧುಗಿರಿ ಪೊಲೀಸ್ ಠಾಣೆಯಲ್ಲಿ ರಾಮಚಂದ್ರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ನೀಡಿದ್ದಾರೆ.
ನಿವೇಶನಕ್ಕಾಗಿ ಹಣ ಪಡೆದ ವ್ಯಕ್ತಿಯೊಬ್ಬ ನಿವೇಶನ ನೀಡದೆ, ಹಣವನ್ನೂ ಮರಳಿಸದೆ ಮೋಸ ಮಾಡಿದ್ದಾನೆ. ಆತನ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಮಹಿಳೆ ರಾಜ್ಯ ಮಹಿಳಾ ಆಯೋಗದ ಮೊರೆ ಹೋಗಿದ್ದರು. ಈ ಸಂಬಂಧ ವಿಚಾರಣೆ ನಡೆಸುವಂತೆ ಮಹಿಳಾ ಆಯೋಗವು ತುಮಕೂರು ಜಿಲ್ಲಾ ಪೊಲೀಸ್ ಕಚೇರಿಗೆ ಪತ್ರ ಬರೆದಿತ್ತು.
‘ಈ ಪ್ರಕರಣದ ವಿಚಾರಣೆ ನೆಪದಲ್ಲಿ ನನ್ನನ್ನು ಕಚೇರಿಗೆ ಕರೆಸಿಕೊಂಡ ಡಿವೈಎಸ್‌ಪಿ ರಾಮಚಂದ್ರಪ್ಪ ಲೈಗಿಂಕ ದೌರ್ಜನ್ಯ ಎಸಗಿದ್ದಾರೆ’ ಎಂದು ಮಹಿಳೆ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.