ADVERTISEMENT

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2023, 14:18 IST
Last Updated 27 ನವೆಂಬರ್ 2023, 14:18 IST
ಮಧುಗಿರಿ ತಾಲ್ಲೂಕಿನ ರಂಟವಳಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಶಿಕ್ಷಕ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪೋಷಕರು ಪ್ರತಿಭಟನೆ ನಡೆಸಿದರು
ಮಧುಗಿರಿ ತಾಲ್ಲೂಕಿನ ರಂಟವಳಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಶಿಕ್ಷಕ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪೋಷಕರು ಪ್ರತಿಭಟನೆ ನಡೆಸಿದರು    

ಮಧುಗಿರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಶಿಕ್ಷಕ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಾಲ್ಲೂಕಿನ ರಂಟವಳಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಮುಂಭಾಗ ಸೋಮವಾರ ಪೋಷಕರು ಪ್ರತಿಭಟನೆ ನಡೆಸಿದರು.

ಶಿಕ್ಷಕ ಲಕ್ಷ್ಮಿಕಾಂತ, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮತ್ತು ಹಿಂಸೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂಬಂಧ ಶಾಲೆ ಮುಖ್ಯ ಶಿಕ್ಷಕ ಕಾಮಣ್ಣ ಅವರಿಗೆ ನ.24ರಂದು ದೂರು ನೀಡಿದರೂ ಮೇಲಧಿಕಾರಿಗೆ ದೂರು ನೀಡದೆ ಅಸಡ್ಡೆ ತೋರಿದ್ದಾರೆ ಎಂದು ಆರೋಪಿಸಿದರು.

ADVERTISEMENT

ವಿಷಯ ತಿಳಿದ ಬಿಇಒ ಹನುಮಂತರಾಯಪ್ಪ ಹಾಗೂ ಸಿಡಿಪಿಒ ಕಮಲ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಹೇಳಿಕೆ ಮತ್ತು ಪೋಷಕರ ದೂರು ಸ್ವೀಕರಿಸಿದರು. ಬಡವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.