ಪಾವಗಡ: ತಾಲ್ಲೂಕಿನ ಗುಂಡಾರ್ಲಹಳ್ಳಿ ಬಳಿ ಶುಕ್ರವಾರ ಬೊಲೆರೊ ವಾಹನ ಡಿಕ್ಕಿಯಾಗಿ ಕುರಿಗಾಹಿ ಮೃತಪಟ್ಟಿದ್ದಾರೆ.
ಗುಂಡಾರ್ಲಹಳ್ಳಿ ಗ್ರಾಮದ ದುರ್ಗಪ್ಪ (60) ಮೃತರು. ಗ್ರಾಮದ ಬಳಿ ಕುರಿ ಮೇಯಿಸುತ್ತಿದ್ದಾಗ ಪಟ್ಟಣದ ಕಡೆಯಿಂದ ಬರುತ್ತಿದ್ದ ವಾಹನ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.