ADVERTISEMENT

ಶಿರಾ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2020, 8:30 IST
Last Updated 9 ಅಕ್ಟೋಬರ್ 2020, 8:30 IST
ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರು ನಾಮಪತ್ರ ಸಲ್ಲಿಸಿದರು
ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರು ನಾಮಪತ್ರ ಸಲ್ಲಿಸಿದರು   

ತುಮಕೂರು: ಶಿರಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಶಿರಾ ಚುನಾವಣಾಧಿಕಾರಿ ಡಾ.ನಂದಿನಿ ದೇವಿ ಅವರಿಗೆ ನಾಮಪತ್ರ ಸಲ್ಲಿಸುವ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್ ಹಾಜರಿದ್ದರು.

ಶಿರಾ ಗ್ರಾಮ ದೇವತೆ ದುರ್ಗಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅವರು ನಾಮಪತ್ರ ಸಲ್ಲಿಸಿದರು.

ADVERTISEMENT

ಮಧ್ಯಾಹ್ನ 12.1 ನಿಮಿಷಕ್ಕೆ ಚುನಾವಣಾಧಿಕಾರಿ ಕಚೇರಿ ಒಳಗೆ ತೆರಳುದ ಅವರು 12.27ಕ್ಕೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದರು.
ಈ ಅವಧಿ ಶುಭಗಳಿಗೆ ಎನ್ನುವ ಕಾರಣ ಜಯಚಂದ್ರ ನಾಮಪತ್ರ ಸಲ್ಲಿಸಿದರು.

ಕಳೆದ ವಿಧಾನಸಭೆ ಚುನಾವಣೆ ವೇಳೆ ಜಯಚಂದ್ರ, ಅವರು ಅಂದುಕೊಂಡಿದ್ದ ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಆ ಸಮಯದಲ್ಲಿ ಮತ್ತೊಬ್ಬರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿತ್ತು. ಈ ಕಾರಣದಿಂದ ಇಂದಿನ ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಅವರ ಆಪ್ತಮೂಲಗಳು ತಿಳಿಸಿವೆ.

ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮುಖಂಡರ ಜತೆ ಅ.15 ರಂದು ನಾಮಪತ್ರ ಸಲ್ಲಿಸುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.