ADVERTISEMENT

ಶಿರಾ | 6 ಕೊಳವೆಬಾವಿ ಕೊರೆಸಿದರು ಬಾರದ ನೀರು: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 6:00 IST
Last Updated 1 ಮಾರ್ಚ್ 2026, 6:00 IST
<div class="paragraphs"><p>ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)</p></div>

ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)

   

ಶಿರಾ: ತಾಲ್ಲೂಕಿನ ಗೌಡಗೆರೆ ಹೋಬಳಿಯ ಬಂದಕುಂಟೆ ಗ್ರಾಮದ ರೈತ ಕೃಷ್ಣಪ್ಪ (64) ನೇಣುಹಾಕಿಕೊಂಡು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃಷ್ಣಪ್ಪ ಅವರಿಗೆ 1.08 ಎಕರೆ ಜಮೀನು ಇದ್ದು, ಏಳು ಕೊಳವೆಬಾವಿ ಕೂರಸಿದ್ದರು. ಒಂದರಲ್ಲಿ ಒಂದು ನೀರು ಬಂದಿತ್ತು. ಬ್ಯಾಂಕ್‌ನಲ್ಲಿ ₹60 ಸಾವಿರ, ಸಹಕಾರ ಸಂಘದಲ್ಲಿ ₹1 ಲಕ್ಷ, ಖಾಸಗಿ ಹಾಗೂ ಫೈನಾನ್ಸ್ ಕಂಪನಿಯಲ್ಲಿ ಸಾಲ ಪಡೆದಿದ್ದರು. ಸಾಲ ತೀರಿಸಲು ಸಾಧ್ಯವಾಗದೆ ಜಮೀನಿನಲ್ಲಿರುವ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಟುಂಬಸ್ಥರು ಆರೋಪಿಸಿದ್ದಾರೆ.

ADVERTISEMENT

ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.