ಶಿರಾ: ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಕ್ಷುಲ್ಲಕ ಕಾರಣಕ್ಕಾಗಿ ಸೋಮವಾರ ನಡೆದ ಜಗಳದಲ್ಲಿ ರಘು ಎನ್ನುವ ವ್ಯಕ್ತಿ ಗಾಯಗೊಂಡಿದ್ದಾನೆ.
ಕಬಾಬ್ ಅಂಗಡಿಯ ಬಳಿ ರಘು ಫೋನ್‌ಪೇ ಮಾಡುತ್ತೇನೆ ನಗದು ನೀಡಿ ಎಂದು ಕೇಳಿದ್ದಾನೆ. ಈ ಸಮಯದಲ್ಲಿ ಅಲ್ಲಿದ್ದ ಮುಸ್ತಾಫ್ ಹಾಗೂ ರಘು ನಡುವೆ ಜಗಳ ಪ್ರಾರಂಭವಾಗಿದೆ. ಮುಸ್ತಾಫ್ ರಘು ಮೇಲೆ ಚಾಕುವಿನಿಂದ ಇರಿಯಲು ಮುಂದಾದಾಗ ಕೈಗೆ ಗಾಯವಾಗಿದೆ. ಶಿರಾ ನಗರ ಠಾಣೆ ಪೊಲೀಸರು ಆರೋಪಿ ಮುಸ್ತಾಫನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಯಾಚರಣೆ: ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಬೀದಿಬದಿ ವ್ಯಾಪಾರಿಗಳು ಅಂಗಡಿ ಇಟ್ಟುಕೊಳ್ಳಬೇಕು. ಸಾರ್ವಜನಿಕರಿಗೆ ತೊಂದರೆಯಾದರೆ ಪ್ರಕರಣ ದಾಖಲಿಸಲಾಗುವುದು ಎಂದು ಸೋಮವಾರ ನಗರಸಭೆ ಸಿಬ್ಬಂದಿ ಹಾಗೂ ಪೊಲೀಸರು ಬೀದಿಬದಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು.
ಭಾನುವಾರ ರಾತ್ರಿ ನಡೆದ ಘಟನೆಯಿಂದ ಎಚ್ಚೆತ್ತ ನಗರಸಭೆ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ನಗರಸಭೆಯ ಪೌರಾಯುಕ್ತ ರುದ್ರೇಶ್ ಹಾಗೂ ಸಿಪಿಐ ಮಂಜೇಗೌಡ ನೇತೃತ್ವದಲ್ಲಿ ನಗರಸಭೆ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸಂಚಾರಕ್ಕೆ ತೊಂದರೆಯಾಗದಂತೆ ಅಂಗಡಿಗಳಿಗೆ ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.