ADVERTISEMENT

ಶಿರಾ| ಅಪಘಾತದಲ್ಲಿ ಗಾಯಗೊಂಡಿದ್ದ ಹೆಡ್ ಕಾನ್‌ಸ್ಟೇಬಲ್ ಸಾವು

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2023, 7:42 IST
Last Updated 20 ಫೆಬ್ರುವರಿ 2023, 7:42 IST
   

ಶಿರಾ: ಅಪಘಾತದಲ್ಲಿ ಗಾಯಗೊಂಡಿದ್ದ ಶಿರಾ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸಿದ್ದೇಶ್ವರ (52) ಸೋಮವಾರ ನಿಧನರಾಗಿದ್ದಾರೆ.

ತಾಲ್ಲೂಕಿನ ಜಾನಕಲ್ಲು ಗ್ರಾಮದಲ್ಲಿ ಶುಕ್ರವಾರ ನಾಟಕ ಕಾರ್ಯಕ್ರಮದ ಬಂದೋಬಸ್ತು ಕಾರ್ಯಕ್ಕೆ‌ ಹೋಗುತ್ತಿದ್ದ ಸಮಯದಲ್ಲಿ ಬುಕ್ಕಾಪಟ್ಟಣ ಗ್ರಾಮದ ಸಮೀಪ ದ್ವಿಚಕ್ರ ವಾಹನದಿಂದ ಬಿದ್ದು ತಲೆಗೆ ತೀವ್ರವಾದ ಬೆಟ್ಟು ಬಿದ್ದು ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.

ಮೃತರಿಗೆ ಪತ್ನಿ, ಪುತ್ರಿ ಮತ್ತು ಪುತ್ರ ಇದ್ದಾರೆ. ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.