ADVERTISEMENT

ಶಿರಾ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಸತ್ಯಪ್ರಕಾಶ್ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 6:06 IST
Last Updated 12 ಫೆಬ್ರುವರಿ 2026, 6:06 IST
ಬಿ‌.ಎಸ್.ಸತ್ಯಪ್ರಕಾಶ್
ಬಿ‌.ಎಸ್.ಸತ್ಯಪ್ರಕಾಶ್   

ಶಿರಾ: ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ಬಿ.ಎಸ್.ಸತ್ಯಪ್ರಕಾಶ್ ರಾಜೀನಾಮೆ ನೀಡಿದ್ದಾರೆ.

ಮಾಜಿ ಸಚಿವ ಬಿ.ಸತ್ಯನಾರಾಯಣ ಅವರ ಪುತ್ರ ಬಿ.ಎಸ್.ಸತ್ಯಪ್ರಕಾಶ್ ಅವರನ್ನು 2024ರ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.

ವೈಯಕ್ತಿಕ ಕಾರಣ ಹಾಗೂ ಪಕ್ಷದಲ್ಲಿನ ಅಂತರಿಕ ವಿಚಾರಗಳಿಂದ ಬೇಸತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ‌ ನೀಡಿರುವುದಾಗಿ ಸತ್ಯಪ್ರಕಾಶ್‌ ಖಚಿತ ಪಡಿಸಿದ್ದಾರೆ. ಜೆಡಿಎಸ್‌ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಎಚ್.ನಿಂಗಪ್ಪ ಅವರಿಗೆ ವಾಟ್ಸ್‌ಆ್ಯಪ್‌ನಲ್ಲಿ‌ ರಾಜೀನಾಮೆ ಪತ್ರ ಕಳುಹಿಸಿದ್ದು, ಎರಡು ದಿನದೊಳಗೆ ಖುದ್ದಾಗಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ADVERTISEMENT

ತಾಲ್ಲೂಕಿನಲ್ಲಿ ಜೆಡಿಎಸ್ ಬೆಳವಣಿಗೆಗೆ ಮಾಜಿ ಸಚಿವ ಬಿ.ಸತ್ಯನಾರಾಯಣ ಅವರ ಕೊಡುಗೆ ಅಪಾರ. ಪಕ್ಷ ನಿಷ್ಠರಾಗಿದ್ದ ಅವರು ಜೀವಿತಾವಧಿಯವರೆಗೂ ಎಚ್.ಡಿ‌.ದೇವೇಗೌಡರಿಗೆ ನಿಷ್ಠರಾಗಿದ್ದರು. ಇವರ ನಿಧನ ನಂತರ ನಡೆದ 2020ರ ಉಪಚುನಾವಣೆಯಲ್ಲಿ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು. 2024ರ ಚುನಾವಣೆಯಲ್ಲಿ ಬಿ.ಎಸ್.ಸತ್ಯಪ್ರಕಾಶ್ ಟಿಕೆಟ್ ಆಕಾಂಕ್ಷಿಯಾಗಿದ್ದ ಸಮಯದಲ್ಲಿ ಅವರನ್ನು ತಾಲ್ಲೂಕು ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿ ಆರ್.ಉಗ್ರೇಶ್ ಅವರಿಗೆ ಟಿಕೆಟ್‌ ನೀಡಲಾಗಿತ್ತು. 2028ರ ವಿಧಾನಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದರು ಎನ್ನಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.