
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಶಿರಾ: ತಾಲ್ಲೂಕಿನ ಕಳ್ಳಂಬೆಳ್ಳ ಕೆರೆಯಲ್ಲಿ ಸೋಮವಾರ ತಾಯಿ ಮತ್ತು ಮಗನ ಶವ ಪತ್ತೆಯಾಗಿದೆ.
ಮೃತರನ್ನು ತಾಲ್ಲೂಕಿನ ಭೂಪಸಂದ್ರ ಗ್ರಾಮದ ಹಂಸಲೇಖ (30) ಹಾಗೂ ಅವರ ಪುತ್ರ ಗುರುಪ್ರಸಾದ್ (10) ಎಂದು ಗುರ್ತಿಸಲಾಗಿದೆ.
ಕಳ್ಳಂಬೆಳ್ಳ ಕೆರೆಯಲ್ಲಿ ಸೋಮವಾರ ಶವಗಳು ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಡಿವೈಎಸ್‌ಪಿ ಬಿ.ಕೆ.ಶೇಖರ್, ಶಿರಾ ಗ್ರಾಮಾಂತರ ಸಿಪಿಐ ಶ್ರೀನಿವಾಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.