
ಶಿರಾ: ತಾಲ್ಲೂಕಿನ ಪಟ್ಟನಾಯಕನಹಳ್ಳಿಯಲ್ಲಿ ಶುಕ್ರವಾರ ಗುರುಗುಂಡ ಬ್ರಹ್ಮೇಶ್ವರಸ್ವಾಮಿ ಜಾತ್ರಾಮಹೋತ್ಸವದ ಅಂಗವಾಗಿ ಐತಿಹಾಸಿಕ ಪ್ರಸಿದ್ಧ ಓಂಕಾರೇಶ್ವರ ಕಲ್ಲುಗಾಲಿ ರಥೋತ್ಸವ ಅದ್ದೂರಿಯಾಗಿ ನಡೆಯಿತು.
ರಥೋತ್ಸವ ಅಂಗವಾಗಿ ಅಭಿಷೇಕ, ಕಳಶಾರಾಧನೆ, ಸಾಯಂಕಾಲ ನಿತ್ಯ ಹೋಮ, ಅಗ್ನಿ ಕುಂಡ, ಕಲ್ಯಾಣೋತ್ಸವ ನೆರವೇರಿತು.
ಓಂಕಾರೇಶ್ವರ ಸ್ವಾಮಿಯನ್ನು ಮೆರವಣಿಗೆಯಲ್ಲಿ ತಂದು ರಥದಲ್ಲಿ ಕುಳ್ಳರಿಸಿ ಜಯಘೋಷಗಳೊಂದಿಗೆ ರಥ ಎಳೆಯಲಾಯಿತು.
ಪಟ್ಟನಾಯಕನಹಳ್ಳಿಯಲ್ಲಿ ರಾತ್ರಿ ವೇಳೆ ರಥೋತ್ಸವ ನಡೆಯುವುದು ವಿಶೇಷ. ರಾತ್ರಿ ಚಳಿಯನ್ನು ಲೆಕ್ಕಿಸದೆ ಅಕ್ಕಪಕ್ಕದ ಗ್ರಾಮಗಳಿಂದ ಭಕ್ತರು ಚಿಕ್ಕ ಮಕ್ಕಳನ್ನು ಕರೆದುಕೊಂಡು ಜಾತ್ರೆಗೆ ಗುಂಪು ಗುಂಪಾಗಿ ನಡೆದುಕೊಂಡು ಬರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ರಥೋತ್ಸವಕ್ಕೆ ರಾಜ್ಯ ಸೇರಿದಂತೆ ಪಕ್ಕದ ಆಂಧ್ರಪ್ರದೇಶದಿಂದ ಸಹ ಭಕ್ತರು ಬಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.