ಶಿರಾ: ನಗರದ ವಿವೇಕಾನಂದ ಕ್ರೀಡಾಂಗಣದಲ್ಲಿ ಡಿಸೆಂಬರ್ 26ರಂದು ನಡೆಯುವ ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ಸಿಗೊಳಿಸುವಂತೆ ತಾಲ್ಲೂಕು ಕಸಾಪ ಅಧ್ಯಕ್ಷ ಬಿ.ಪಿ.ಪಾಂಡುರಂಗಯ್ಯ ಮನವಿ ಮಾಡಿದರು.
ಐದು ವರ್ಷಗಳ ನಂತರ ನಡೆಯುತ್ತಿರುವ ಸಮ್ಮೇಳನದ ಸರ್ವಾಧ್ಯಕ್ಷರಾಗಿ ‘ಸುಧಾ’ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿರುವುದಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಾಹಿತಿ ಬರಗೂರು ರಾಮಚಂದ್ರಪ್ಪ, ಶಾಸಕ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಸಮ್ಮುಖದಲ್ಲಿ ಸಮ್ಮೇಳನ ಯಶಸ್ವಿಗಾಗಿ ಸಭೆಗಳನ್ನು ನಡೆಸಲಾಗಿದೆ. ಕನ್ನಡ ಪರ ಸಂಘಟನೆಗಳು, ಹೋರಾಟಗಾರರು, ಸಂಘ ಸಂಸ್ಥೆಗಳು, ಅಧಿಕಾರಿಗಳ ಹಾಗೂ ಕನ್ನಡ ಪ್ರೇಮಿಗಳ ಸಹಕಾರ ನೀಡಿ ಊರ ಹಬ್ಬದಂತೆ ಆಚರಿಸಬೇಕು ಎಂದರು.
ಕಸಾಪ ಕೋಶಾಧ್ಯಕ್ಷ ಹಿಮಂತರಾಜು, ಗೌರವ ಕಾರ್ಯದರ್ಶಿ ಪರಮೇಶ್ ಗೌಡ, ದ್ವಾರನಕುಂಟೆ ಲಕ್ಷ್ಮಣ್, ಹೆಂದೊರೆ ಶಿವಣ್ಣ, ರಂಗರಾಜು, ದರಣಿಕುಮಾರ್ ಗೋಷ್ಠಿಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.