ADVERTISEMENT

ಶಿರಾ: ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 5:36 IST
Last Updated 26 ಫೆಬ್ರುವರಿ 2026, 5:36 IST
<div class="paragraphs"><p>(ಸಾಂದರ್ಭಿಕ ಚಿತ್ರ)</p></div>

(ಸಾಂದರ್ಭಿಕ ಚಿತ್ರ)

   

ಗೆಟ್ಟಿ ಚಿತ್ರ

ಶಿರಾ: ರಾಷ್ಟ್ರೀಯ ಹೆದ್ದಾರಿ-48ರ ದೊಡ್ಡ ಅಲದಮರ ಬಳಿ ಮಂಗಳವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಭರತ್ (30) ಮೃತಪಟ್ಟಿದ್ದಾರೆ.

ADVERTISEMENT

ತಾಲ್ಲೂಕಿನ ಚೇಳೂರು ಹೋಬಳಿ ದೊಡ್ಡಬೀರನಹಳ್ಳಿ ಗ್ರಾಮದ ಭರತ್ ಹಾಗೂ ನವೀನ್ ದ್ವಿಚಕ್ರವಾಹನದಲ್ಲಿ ತುಮಕೂರು ಕಡೆ ಹೋಗುತ್ತಿದ್ದಾಗ ದೊಡ್ಡ ಅಲದಮರ ಬಳಿ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಖಾಸಗಿ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಾಗ ಭರತ್ ಸ್ಥಳದಲ್ಲೇ ಮೃತಪಟ್ಟರೆ ತೀವ್ರವಾಗಿ ಗಾಯಗೊಂಡಿದ್ದ ನವೀನ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳ್ಳಂಬೆಳ್ಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.