ಶಿರಾ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್ ಅವರನ್ನು ಶಿರಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಸರ್ಕಾರ ನಾಮನಿರ್ದೇಶನ ಮಾಡಿದೆ.
ಶಿರಾ ಯೋಜನಾ ಪ್ರಾಧಿಕಾರವನ್ನು ಸರ್ಕಾರ ಮೇಲ್ದರ್ಜೆಗೇರಿಸಿ ಶಿರಾ ನಗರಾಭಿವೃದ್ಧಿ ಪ್ರಾಧಿಕಾರವಾಗಿ ರಚನೆ ಮಾಡಿದ ನಂತರ ಶಾಸಕ ಟಿ.ಬಿ.ಜಯಚಂದ್ರ ಅವರ ಮನವಿ ಮೇರೆಗೆ ಸರ್ಕಾರ ಪಿ.ಆರ್.ಮಂಜುನಾಥ್ ಅವರನ್ನು ನಾಮ ನಿರ್ದೇಶನ ಮಾಡಿದ್ದು, ಇವರು ಶಿರಾ ನಗರಾಭಿವೃದ್ಧಿ ಪ್ರಾಧಿಕಾರದ ಮೊದಲ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ತಾ.ಪಂ ಮಾಜಿ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಸ್.ಎನ್.ಸುನೀಲ್, ತಾ.ಪಂ ಮಾಜಿ ಸದಸ್ಯ ಲಕ್ಕನಹಳ್ಳಿ ಎಚ್.ಶ್ರೀನಿವಾಸ್ ಹಾಗೂ ಗ್ರಾ.ಪಂ ಮಾಜಿ ಅಧ್ಯಕ್ಷ ಎತ್ತಪ್ಪನಹಟ್ಟಿ ಎನ್.ಕಾಳಪ್ಪ ಅವರನ್ನು ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.