
ತುಮಕೂರು: ನಗರದ ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹುಟ್ಟು ಹಬ್ಬದ ಪ್ರಯುಕ್ತ ಮಠದಲ್ಲಿ ಶುಕ್ರವಾರ ವಿವಿಧ ಕಾರ್ಯಕ್ರಮಗಳು ನೆರವೇರಿದವು.
ಮಠದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆಯಿಂದ ರಾತ್ರಿ ವರೆಗೆ ಭಕ್ತರು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿ ಆಶೀರ್ವಾದ ಪಡೆದುಕೊಂಡರು.
ಬೆಳ್ಳಾವಿ ಕಾರದ ಮಠದ ಕಾರದ ವೀರಬಸವ ಸ್ವಾಮೀಜಿ, ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ, ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಹಲವು ಮುಖಂಡರು ಮಠಕ್ಕೆ ಭೇಟಿ ನೀಡಿದ್ದರು.
‘ಸನ್ಯಾಸ ಜೀವನ ಸ್ವೀಕರಿಸಿದ ಮೇಲೆ ಅದಕ್ಕೆ ನ್ಯಾಯ ಒದಗಿಸುವುದು ಸನ್ಯಾಸಿಯ ಆದ್ಯ ಕರ್ತವ್ಯ. ಸನ್ಯಾಸದ ಬಗ್ಗೆ ಗೌರವವಿದೆ. ನಾಡಿನ ಎಲ್ಲಾ ಜನ ಪ್ರೀತಿ, ವಿಶ್ವಾಸ ತೋರುತ್ತಿದ್ದಾರೆ’ ಎಂದು ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಈ ಸಂದರ್ಭದಲ್ಲಿ ಸ್ಮರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.