ತುಮಕೂರು: ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ನಗರದ ರಾಮಮಂದಿರದಲ್ಲಿ ಶನಿವಾರ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಆಯೋಜಿಸಲಾಗಿತ್ತು.
ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಭಜನಾ ಸ್ಪರ್ಧೆ, ಏಕಪಾತ್ರಾಭಿನಯ, ಜನಪದ ಗೀತೆ ಗಾಯನ ನೆರವೇರಿತು. ಇದೇ ವೇಳೆ ವಿವಿಧ ಶಾಲಾ–ಕಾಲೇಜಿನ ವಿದ್ಯಾರ್ಥಿಗಳು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕುಡಿಕೆ ಒಡೆದರು. ಮಂದಿರದ ಆವರಣದಲ್ಲಿರುವ ಮರಕ್ಕೆ ಕುಡಿಕೆ ಕಟ್ಟಲಾಗಿತ್ತು. ಮಕ್ಕಳು ಹೆಜ್ಜೆಯಲ್ಲಿ ಹೆಜ್ಜೆ ಇಟ್ಟು ಕುಡಿಕೆ ನೇತಾಡುತ್ತಿದ್ದ ಜಾಗ ಕಂಡು ಕೊಂಡರು. ಕುಡಿಕೆ ಒಡೆದು ನಗು ಬೀರಿದರು.
ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಶಿಕ್ಷಕರು, ಪೋಷಕರು ಪ್ರೋತ್ಸಾಹಿಸಿದರು. ಜನ್ಮಾಷ್ಟಮಿ ಅಂಗವಾಗಿ ಸೆ. 1ರಂದು ಶ್ರೀಕೃಷ್ಣ ವೇಷ ಸ್ಪರ್ಧೆ ಏರ್ಪಡಿಸಲಾಗಿದೆ. 8 ವರ್ಷದ ಒಳಗಿನ ಮಕ್ಕಳು ಭಾಗವಹಿಸಲು ಅವಕಾಶ ಕಲ್ಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.