ತುಮಕೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಸಿದ್ಧಗಂಗಾ ಮಠ ಹಾಗೂ ಸಿದ್ಧಗಂಗಾ ವಿದ್ಯಾಸಂಸ್ಥೆಯಿಂದ ₹ 50 ಲಕ್ಷವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಯಿತು.
ಮಠದ ₹ 25 ಲಕ್ಷ ಹಾಗೂ ಸಿದ್ಧಗಂಗಾ ವಿದ್ಯಾಸಂಸ್ಥೆಯ ₹ 25 ಲಕ್ಷದ ಡಿಡಿಯನ್ನು ಮಠದಲ್ಲಿ ಶನಿವಾರ ಸಿದ್ಧಲಿಂಗ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಹಸ್ತಾಂತರಿಸಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಮಠದ ವ್ಯವಸ್ಥಾಪಕ ವಿಶ್ವನಾಥಯ್ಯ, ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಟಿ.ಕೆ.ನಂಜುಂಡಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.