ADVERTISEMENT

21ರಂದು ಶಿವಕುಮಾರ ಸ್ವಾಮೀಜಿ ಸ್ಮರಣೋತ್ಸವ

ಸಿದ್ಧಗಂಗಾ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 19 ಜನವರಿ 2025, 14:54 IST
Last Updated 19 ಜನವರಿ 2025, 14:54 IST
ಶಿವಕುಮಾರ ಸ್ವಾಮೀಜಿ
ಶಿವಕುಮಾರ ಸ್ವಾಮೀಜಿ   

ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ 6ನೇ ವರ್ಷದ ಸಂಸ್ಮರಣೋತ್ಸವ ಕಾರ್ಯಕ್ರಮ ಜ.21ರಂದು ಮಠದಲ್ಲಿ ನಡೆಯಲಿದೆ.

ಬೆಳಿಗ್ಗೆ 5 ಗಂಟೆಯಿಂದ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಲಿದೆ. ನಂತರ ರುದ್ರಾಕ್ಷಿ ಮಂಟಪದಲ್ಲಿ ಶಿವಕುಮಾರ ಸ್ವಾಮೀಜಿ ಮೂರ್ತಿಯ ಮೆರವಣಿಗೆ ಏರ್ಪಡಿಸಲಾಗಿದೆ.

ಬೆಳಿಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸಾಹಿತಿ ಗೊ.ರು.ಚನ್ನಬಸಪ್ಪ ಅವರಿಗೆ ‘ಸಿದ್ಧಗಂಗಾಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತದೆ. ರಾಜ್ಯಪಾಲ ಥಾವರಚಂದ್‌ ಗೆಹಲೋತ್‌, ಮೇಘಾಲಯ ರಾಜ್ಯಪಾಲ ಸಿ.ಎಚ್.ವಿಜಯಶಂಕರ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸುತ್ತೂರು ಸಂಸ್ಥಾನ ಮಠದ ಶಿವರಾತ್ರಿ ದೇಶೀಕೆಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಶಿವಸಿದ್ದೇಶ್ವರ ಸ್ವಾಮೀಜಿ, ಶ್ರವಣಬೆಳಗೊಳದ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಜರಾಗಲಿದ್ದಾರೆ.

ADVERTISEMENT

ಕೇಂದ್ರ ಸಚಿವ ವಿ.ಸೋಮಣ್ಣ, ಸಚಿವರಾದ ಡಾ.ಜಿ.ಪರಮೇಶ್ವರ, ಕೆ.ಎನ್.ರಾಜಣ್ಣ, ಶಾಸಕರಾದ ಬಿ.ಸುರೇಶ್‌ಗೌಡ, ಬಿ.ಜಿ.ಜ್ಯೋತಿಗಣೇಶ್‌ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿ ಸಂಘದ 68ನೇ ಸರ್ವ ಸದಸ್ಯರ ಮಹಾಧಿವೇಶನ ಹಮ್ಮಿಕೊಳ್ಳಲಾಗಿದೆ. ಸಾಹಿತಿ ಟಿ.ಎಚ್‌.ಶೈಲಜಾ, ಜಿ.ಎನ್‌.ಬಸವರಾಜಪ್ಪ ಅವರಿಗೆ ‘ಸಿದ್ಧಗಂಗಾ ಶಿವಕುಮಾರಶ್ರೀ’ ಪ್ರಶಸ್ತಿ, ಎಸ್‌.ಶಿವಾನಂದ ಶರ್ಮಾ, ಎಸ್‌.ಆರ್‌.ರೇಣುಕಾರಾಧ್ಯ, ಶಿವಕುಮಾರ ಮೂರ್ತಿ, ವೆಂಕಟೇಗೌಡ, ಬಿ.ಎಂ.ಪರಮೇಶ್ವರಪ್ಪ (ಮರಣೋತ್ತರ) ಅವರಿಗೆ ‘ಸಂಘಸಿರಿ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

‘ಸ್ಮರಣೋತ್ಸವ ಕಾರ್ಯಕ್ರಮಕ್ಕೆ ಹಾಜರಾಗುವವರಿಗೆ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಆವರಣ, ಸಾದರ ಕೊಪ್ಪಲು ಪ್ರಸಾದ ನಿಲಯ ಮತ್ತು ಮಠದ ಹೊಸ ಪ್ರಸಾದ ನಿಲಯಗಳಲ್ಲಿ ದಾಸೋಹಕ್ಕೆ ವ್ಯವಸ್ಥೆ ಮಾಡಲಾಗಿದೆ’ ಎಂದು ಮಠದ ಆಡಳಿತಾಧಿಕಾರಿ ಎಸ್.ವಿಶ್ವನಾಥಯ್ಯ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.