
ಪ್ರಜಾವಾಣಿ ವಾರ್ತೆಸಿದ್ಧಗಂಗಾ ಶ್ರೀ ಸಂಸ್ಮರಣೆ
ತುಮಕೂರು: ನಗರದ ಸಿದ್ಧಗಂಗಾ ಮಠದಲ್ಲಿ ಬುಧವಾರ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಸಂಸ್ಮರಣಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.
ಬೆಳಿಗ್ಗೆ ಶಿವಕುಮಾರ ಸ್ವಾಮೀಜಿ ಗದ್ದುಗೆಯಲ್ಲಿ ರುದ್ರಾಭಿಷೇಕ ಸೇರಿ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದವು. ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಶಿವಸಿದ್ಧೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳು ನಡೆದವು. ಮಠದ ಆವರಣದಲ್ಲಿ ಶಿವಕುಮಾರ ಸ್ವಾಮೀಜಿ ಪುತ್ಥಳಿಯ ಮೆರವಣಿಗೆಯು ನಡೆಯಿತು.
ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್, ರಾಜ್ಯಪಾಲ ಥಾವರಚಂದ್ ಗೆಹಲೋತ್, ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ಸಂಸದರಾದ ಡಾ.ಸಿ.ಎನ್.ಮಂಜುನಾಥ್, ಗೋವಿಂದ ಕಾರಜೋಳ, ಶಾಸಕರಾದ ಟಿ.ಬಿ.ಜಯಚಂದ್ರ, ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್ ಮೊದಲಾದವರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.