ಸಿದ್ದರಾಮಯ್ಯ
ಪಾವಗಡ: ಮಾತೆತ್ತಿದರೆ ಚುನಾವಣೆಗೆ ಬರುವಂತೆ ಆಹ್ವಾನ ನೀಡುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕುರ್ಚಿಯೇ ಅಲುಗಾಡುತ್ತಿದೆ. ಮುಂದಿನ ವಿಧಾನಸಭೆ ಚುನಾವಣೆ ವರೆಗೂ ಅಧ್ಯಕ್ಷರಾಗಿ ಇರುವುದಿಲ್ಲ ಎಂದು ಸಿದ್ದರಾಮಯ್ಯ ಕುಟುಕಿದರು.
ಕಾಂಗ್ರೆಸ್ ಅಧಿಕಾರದಲ್ಲಿ ಮುಂದುವರಿಯುವುದಿಲ್ಲ ಎಂದು ವಿಜಯೇಂದ್ರ ಹೇಳುತ್ತಿದ್ದಾರೆ. 2028ರ ವರೆಗೆ ನಾವು ಅಧಿಕಾರದಲ್ಲಿ ಇರುತ್ತೇವೆ. ಮುಂದೆಯೂ ಅಧಿಕಾರಕ್ಕೆ ಬರುತ್ತೇವೆ. ಚುನಾವಣೆಗೆ ಹೆದರುವುದಿಲ್ಲ ಎಂದು ಹೇಳಿದರು.
ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ್ದರಿಂದ ಬಿಜೆಪಿ, ಜೆಡಿಎಸ್‌ನವರಿಗೆ ಹೊಟ್ಟೆಯುರಿ ಆರಂಭವಾಗಿದ್ದು, ತಡೆದುಕೊಳ್ಳಲಾಗುತ್ತಿಲ್ಲ. ಬಿಜೆಪಿ, ಜೆಡಿಎಸ್‌ನವರಿಗೆ ಕೈ ಮುಗಿದು ಪ್ರಾರ್ಥನೆ ಮಾಡಿಕೊಳ್ಳುತ್ತೇನೆ. ಸುಳ್ಳು ಹೇಳಿ ಜನರನ್ನು ಮೋಸ ಮಾಡಬೇಡಿ. ಇಂತಹ ಸುಳ್ಳುಗಳನ್ನು ಜನರು ನಂಬಬಾರದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.