ADVERTISEMENT

ವಿದ್ಯಾರ್ಥಿನಿಗೆ ಸೀಟು ನಿರಾಕರಣೆ: ಸಿದ್ಧಾರ್ಥ ವೈದ್ಯಕೀಯ ಕಾಲೇಜಿಗೆ ₹15 ಲಕ್ಷ ದಂಡ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2025, 5:27 IST
Last Updated 29 ಆಗಸ್ಟ್ 2025, 5:27 IST
<div class="paragraphs"><p>ದಂಡ (ಸಾಂದರ್ಭಿಕ ಚಿತ್ರ)</p></div>

ದಂಡ (ಸಾಂದರ್ಭಿಕ ಚಿತ್ರ)

   

– ಐಸ್ಟಾಕ್ ಚಿತ್ರ

ಬೆಂಗಳೂರು: ಎಂಬಿಬಿಎಸ್ ಕೋರ್ಸ್‌ಗೆ 2017–18ನೇ ಶೈಕ್ಷಣಿಕ ಸಾಲಿನಲ್ಲಿ ಅರ್ಹ ವಿದ್ಯಾರ್ಥಿನಿಯೊಬ್ಬರಿಗೆ ಪ್ರವೇಶ ನಿರಾಕರಿಸಿದ್ದ ತುಮಕೂರಿನ ಸಿದ್ಧಾರ್ಥ ಸಮೂಹ ಸಂಸ್ಥೆಗಳ ಸಿದ್ಧಾರ್ಥ ವೈದ್ಯಕೀಯ ಕಾಲೇಜಿಗೆ ಹೈಕೋರ್ಟ್‌ ₹15 ಲಕ್ಷ ದಂಡ ವಿಧಿಸಿದೆ.

ADVERTISEMENT

ಈ ಕುರಿತಂತೆ ಸಂತ್ರಸ್ತ ವಿದ್ಯಾರ್ಥಿನಿ ಸಂಜನಾ ವಿ.ತುಮಕೂರು ಅವರು ಸಲ್ಲಿಸಿದ್ದ ರಿಟ್‌ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ದಂಡದ ಮೊತ್ತವನ್ನು ಸಂತ್ರಸ್ತ ಅರ್ಜಿದಾರರಿಗೆ ಪರಿಹಾರ ರೂಪದಲ್ಲಿ ಪಾವತಿಸಿ’ ಎಂದು ಆದೇಶ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.