
ಪ್ರಜಾವಾಣಿ ವಾರ್ತೆ
ತುಮಕೂರು: ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಟ್ರಸ್ಟ್ ಕೊಡಮಾಡುವ 2022–23ನೇ ಸಾಲಿನ ‘ಸಿದ್ಧಗಂಗಾ ಶ್ರೀ’ ಪ್ರಶಸ್ತಿಗೆ ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್ ಆಯ್ಕೆ ಆಗಿದ್ದಾರೆ.
ಪ್ರಶಸ್ತಿ ₹1 ಲಕ್ಷ ನಗದು, ಅಭಿನಂದನಾ ಪತ್ರ, ಸ್ಮರಣಿಕೆ ಒಳಗೊಂಡಿದೆ. ಬಾಹ್ಯಾಕಾಶ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಜೀವಮಾನದ ಸಾಧನೆ ಪರಿಗಣಿಸಿ ಕಿರಣ್ ಕುಮಾರ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸಿದ್ಧಗಂಗಾ ಮಠದಲ್ಲಿ ಡಿ. 17ರಂದು ನಡೆಯುವ ಟ್ರಸ್ಟ್‌ನ 67ನೇ ಸರ್ವಸದಸ್ಯರ ವಾರ್ಷಿಕ ಮಹಾಧಿವೇಶನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.