ಶಿರಾ: ನಗರದ ಸಿರಿಗಂಧ ಪ್ಯಾಲೇಸ್‌ನಲ್ಲಿ ಜೂನ್ 19ರಂದು ಜನರೊಂದಿಗೆ ಜನತಾದಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ರಾಜ್ಯ ಸಮಿತಿ ಅಧ್ಯಕ್ಷ ಆರ್.ಉಗ್ರೇಶ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ ಹಾಗೂ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್.ಸತ್ಯಪ್ರಕಾಶ್ ಹೇಳಿದರು.
ಯುವಜನತಾದಳದ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡಿದ್ದ ಸಮಯದಲ್ಲಿ ಮಿಸ್ಡ್‌ಕಾಲ್ ಸದಸ್ಯತ್ವ ಅಭಿಯಾನ ಹಾಗೂ ಜನರೊಂದಿಗೆ ಜನತಾದಳ ಸಮಾವೇಶಕ್ಕೆ ಚಾಲನೆ ನೀಡುವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಬಡವರ ಪರವಾದ ಜನಪರ ಯೋಜನೆಗಳು ತಟಸ್ಥವಾಗಿದ್ದು, ಸಾಮಾನ್ಯ ಜನತೆ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಮಯದಲ್ಲಿ ಸಾಮಾನ್ಯ ಜನರ ಪರವಾಗಿ ಜೆಡಿಎಸ್ ನಿಂತು ಅವರಿಗೆ ನ್ಯಾಯ ಕಲ್ಪಿಸಲು ಹೋರಾಟ ಹಮ್ಮಿಕೊಳ್ಳಲಿದೆ ಎಂದರು.
ಜಿ.ಪಂ ಮಾಜಿ ಉಪಾಧ್ಯಕ್ಷ ಮುಡಿಮಡು ರಂಗಶ್ವಾಮಯ್ಯ, ನಗರಸಭೆ ಸದಸ್ಯರಾದ ಆರ್.ರಾಮು, ಅಂಜಿನಪ್ಪ, ಆರ್.ರಾಘವೇಂದ್ರ, ಮುಖಂಡರಾದ ನರಸಿಂಹಮೂರ್ತಿ, ಉದಯಶಂಕರ್, ರಂಗನಾಥ ಗೌಡ, ರಂಗನಾಥಪ್ಪ, ಶ್ರೀಧರ್, ಶ್ರೀರಂಗ, ಸುನೀಲ್, ನಟರಾಜು, ರೇಣುಕಮ್ಮ ಗೋಷ್ಠಿಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.