ADVERTISEMENT

ಶಿರಾ: ಕಳ್ಳಂಬೆಳ್ಳ ಚೆಕ್ ಪೋಸ್ಟ್‌ನಲ್ಲಿ ₹64 ಲಕ್ಷ ವಶ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 16:31 IST
Last Updated 28 ಅಕ್ಟೋಬರ್ 2020, 16:31 IST
   

ತುಮಕೂರು: ಶಿರಾ ತಾಲ್ಲೂಕು ಕಳ್ಳಂಬೆಳ್ಳ ಚೆಕ್ ಪೋಸ್ಟ್‌ನಲ್ಲಿ ಚುನಾವಣಾ ಸಿಬ್ಬಂದಿ ₹64,40,000 ನಗದು ವಶ ಪಡಿಸಿಕೊಂಡಿದ್ದಾರೆ.

ಖಾಸಗಿ ವಾಹನದಲ್ಲಿ ಈ ಹಣ ಇತ್ತು. ಬೆಂಗಳೂರಿನಿಂದ ಚನ್ನಗಿರಿಗೆ ಹಣ ಕೊಂಡೊಯ್ಯಲಾಗುತ್ತಿತ್ತು ಎಂದು ವಾಹನದಲ್ಲಿ ಇದ್ದವರು ತಿಳಿಸಿದ್ದಾರೆ‌. ಹಣದ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಚುನಾವಣಾ ಸಿಬ್ಬಂದಿ ಮಾಹಿತಿ ನೀಡಿದ್ದಾರೆ‌. ಖಜಾನೆಯಲ್ಲಿ ಹಣವನ್ನು ಇರಿಸಲಾಗಿದೆ.

ವಾಹನದಲ್ಲಿ ಯಾವುದೇ ಪಕ್ಷದ ಪ್ರಚಾರ ಸಾಮಗ್ರಿ ಇರಲಿಲ್ಲ.

ADVERTISEMENT

ಚುನಾವಣಾ ಅಧಿಕಾರಿ ನಂದಿನಿದೇವಿ, ಸಹಾಯಕ ಚುನಾವಣಾ ಅಧಿಕಾರಿ ಮಮತಾ, ಕೇಂದ್ರ ಚುನಾವಣಾ ಆಯೋಗದ ವೆಚ್ಚ ವೀಕ್ಷಕ ಮೃತ್ಯುಂಜಯ ಸೇನಿ ಚೆಕ್ ಪೋಸ್ಟ್‌ಗೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.