ADVERTISEMENT

ಶಿರಾ: ಮರಕ್ಕೆ ಡಿಕ್ಕಿ ಹೊಡೆದು ಕಾರಿಗೆ ಹೊತ್ತಿಕೊಂಡ ಬೆಂಕಿ‌: ವ್ಯಕ್ತಿ ಸಜೀವ ದಹನ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2025, 3:06 IST
Last Updated 26 ಡಿಸೆಂಬರ್ 2025, 3:06 IST
ಮುದ್ದರಂಗನಹಳ್ಳಿ ಗೇಟ್ ಸಮೀಪ ಮಂಗಳವಾರ ರಾತ್ರಿ ಸಂಭವಿಸಿದ ಅಪಘಾತ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಶೋಕ್ ಕೆ.ವಿ ಭೇಟಿ ನೀಡಿ ಪರಿಶೀಲಿಸಿದರು
ಮುದ್ದರಂಗನಹಳ್ಳಿ ಗೇಟ್ ಸಮೀಪ ಮಂಗಳವಾರ ರಾತ್ರಿ ಸಂಭವಿಸಿದ ಅಪಘಾತ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಶೋಕ್ ಕೆ.ವಿ ಭೇಟಿ ನೀಡಿ ಪರಿಶೀಲಿಸಿದರು   

ಶಿರಾ: ತಾಲ್ಲೂಕಿನ ಮುದ್ದರಂಗನಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದ ಶಿರಾ- ಅಮರಾಪುರ ರಸ್ತೆಯಲ್ಲಿ ಮಂಗಳವಾರ ರಾತ್ರಿ ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡ ಪರಿಣಾಮ ಕಾರೊಂದು ಸಂಪೂರ್ಣವಾಗಿ ಸುಟ್ಟು ಹೋಗಿದೆ.

ಕಾರಿನಲ್ಲಿದ್ದ ಹೊನ್ನಾಳಿಯ ಮಂಜುನಾಥ್ (25) ಸಜೀವ ದಹನವಾಗಿದ್ದಾರೆ. ಮೃತ ವ್ಯಕ್ತಿ ಚಾಲಕನ ಸೀಟು ಬಿಟ್ಟು ಹಿಂದಿನ ಸೀಟಿನಲ್ಲಿ ಕುಳಿತಿದ್ದುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಾರಿನಲ್ಲಿ ಮತ್ತೊಬ್ಬರು ಪ್ರಯಾಣಿಸುತ್ತಿದ್ದರೆ ಎಂಬ ಅನುಮಾನ ಮೂಡಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಶೋಕ್ ಕೆ.ವಿ, ಡಿವೈಎಸ್‌ಪಿ ಶೇಖರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ADVERTISEMENT

ಪಟ್ಟನಾಯಕನಹಳ್ಳಿ ಠಾಣೆ ಪೊಲೀಸರು ತನಿಖೆ‌ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.